ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿಮ್ಮ ವೈಫಲ್ಯಗಳಿಗೆ ಪೊಲೀಸ್ ಇಲಾಖೆಯನ್ನು ದೂರದೇ, ನೀವೇ ರಾಜೀನಾಮೆ ನೀಡಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೀಗೆಹಟ್ಟಿಯಲ್ಲಿ ಹಲವು ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಸ್ಥಳ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಸಚಿವರು, ಪೊಲೀಸ್ ಇಲಾಖೆಯ ವೈಫಲ್ಯ ಎಂದು ಹೇಳಿರುವುದು ಸರಿಯಲ್ಲ. ಸರಿಯಾಗಿ ಕೆಲಸ ಮಾಡಿ, ಇಲ್ಲವಾದರೆ ನಿಮ್ಮ ಜಾಗಕ್ಕೆ ಬೇರೆಯವರನ್ನು ಕರೆಸಬೇಕಾಗುತ್ತದೆ ಎಂದು ಹೇಳಿರುವುದು ಪೊಲೀಸ್ ಇಲಾಖೆಯ ಆತ್ಮಸ್ಥೈರ್ಯ ಕುಂದಿಸಿದಂತಾಗಿದೆ ಎಂದರು.
ಜವಾಬ್ದಾರಿ ಸ್ಥಾನದಲ್ಲಿ ಕುಳಿತ ಸಚಿವರು ಈ ರೀತಿ ಮಾತನಾಡುವುದು ಸರಿಯಲ್ಲ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹೇಗಿರಬೇಕು ಎಂಬುದನ್ನು ಇಲಾಖೆಗಳಿಗೆ ಸಚಿವರೇ ತಿಳಿಸಿ ಹೇಳಬೇಕು. ಆದರೆ, ಅವರ ಜವಾಬ್ದಾರಿಯನ್ನು ಮರೆತು, ತಮ್ಮ ವೈಫಲ್ಯಕ್ಕೆ ಪೊಲೀಸ್ ಇಲಾಖೆ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಇದು ಸಚಿವರ ವೈಫಲ್ಯವಾಗಿದ್ದು, ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
Get In Touch With Us info@kalpa.news Whatsapp: 9481252093
















