ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ ಅನ್ನು ಸುಸಜ್ಜಿತವಾಗಿ ರೂಪಿಸುವ ಮತ್ತು ನಾಗರಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಸಂಕಲ್ಪದೊಂದಿಗೆ ಇಂದು ಶಾಸಕರಾದ ಎಸ್ಎನ್ ಚನ್ನಬಸಪ್ಪ MLA Channabasappa ಅವರು ನಗರದ ವಿವಿಧ ಭಾಗಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ವಾರ್ಡ್ ನಂಬರ್ 5: ಪೂರಲೆ ಭಾಗದ ಅಂಬುಜ ಅಪಾರ್ಟ್‌ಮೆಂಟ್ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ.
ವಾರ್ಡ್ ನಂಬರ್ 18: ಆರ್.ಎಂ.ಎಲ್ ನಗರದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ.
ಸಾರ್ವಜನಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳನ್ನು ಅತ್ಯಂತ ಗುಣಮಟ್ಟದಿಂದ ಹಾಗೂ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ಇದೇ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ಪೆರುಮಾಳ್, ರಮೇಶ್, ಜಗನ್ನಾಥ್, ಹರ್ಷ, ಮಲ್ಲಿಕಾರ್ಜುನ್, ಆನಂದ್, ವಾರ್ಡ್ ನ ಅಧ್ಯಕ್ಷರಾದ ರಮೇಶ್, ಕಾರ್ಯದರ್ಶಿ ಶ್ರೀನಿವಾಸ್, ಸುಧೀರ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















