ಕೃಷಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಇಂದು ಸಚಿವ ಚೆಲುವರಾಯಸ್ವಾಮಿ Minister Cheluvarayaswamy ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕೃಷಿ ಇಲಾಖೆಯಲ್ಲಿ ಅನೇಕ ಸಮಸ್ಯೆಗಳಿವೆ. ಕೃಷಿಗೆ ಸಂಬಂಧಪಟ್ಟ ಯೋಜನೆಗಳು, ಕಾರ್ಯಕ್ರಮಗಳು ರೈತರಿಗೆ, ಸಾರ್ವಜನಿಕರಿಗೆ ತಲುಪುತ್ತಿಲ್ಲ. ಹೆಚ್ಚು ಪ್ರಚಾರವಾಗುವಂತೆ ಕೃಷಿ ಇಲಾಖೆ ಸ್ಥಳೀಯ ಸಂಸ್ಥೆಗಳು, ಟಿವಿ ಆಕಾಶವಾಣಿ ಮಾಧ್ಯಮ ಮತ್ತು ಗ್ರಾಮಸಭೆಗಳಲ್ಲಿ ಕರಪತ್ರ ಹಂಚುವ ಮೂಲಕ ಪ್ರಚಾರ ಕೈಗೊಳ್ಳುವಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Also read: ಜು.27ರಂದು ರಾಜ್ಯದ 23 ಸಾರಿಗೆ ಸಂಘಟನೆಗಳಿಂದ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೀಶ್, ರಮೇಶ್ ಹೆಗ್ಡೆ, ಶಾಮೀರ್ ಖಾನ್, ಪ್ರಮುಖರಾದ ನಗರದ ಮಹದೇವಪ್ಪ, ಚಂದ್ರಭೂಪಾಲ್, ಕೆ. ರಂಗನಾಥ್, ಹೆಚ್.ಪಿ. ಗಿರೀಶ್, ಇಕ್ಕೇರಿ ರಮೇಶ್, ಲೋಕೇಶ್ ಮುಂತಾದವರಿದ್ದರು.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 






Discussion about this post