ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಿಂದ ಜೋಗ ಜಲಪಾತ #Jog falls ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.
ಮುಖ್ಯ ರಸ್ತೆಯ ವೀವ್ ಪಾಯಿಂಟ್, #View Point ಯಾತ್ರಿ ನಿವಾಸ, #Yatri Nivasa ರಾಣಿ ಫಾಲ್ಸ್, #Rani falls ಮುಂಬಯಿ ಬಂಗಲೆ, #Mumbai Bunglow ಮುಂಗಾರು ಮಳೆ ಪಾಯಿಂಟ್ #Mungarumale Point ಸೇರಿದಂತೆ ಇತರೆ ಸ್ಥಳಗಳಿಂದ ಪ್ರವಾಸಿಗರು ಜಲಪಾತದ ಸೊಬಗು ಕಣ್ತುಂಬಿಕೊಳ್ಳಬಹುದು ಎಂದು ಭಾನುವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Also read: ಶಿವಮೊಗ್ಗ | ಅಕ್ರಮ ಮದ್ಯ ಸಾಗಾಟ | ಇಬ್ಬರ ಬಂಧನ
ಜೋಗ ಜಲಪಾತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಲಪಾತ ವೀಕ್ಷಿಸಲು ತೆರಳುವ ಮುಖ್ಯ ಪ್ರವೇಶ ದ್ವಾರದ ಗೋಪುರ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ಆದ್ದರಿಂದ ಜ.1ರಿಂದ ಮಾರ್ಚ್ 15ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಈಚೆಗೆ ಆದೇಶ ಹೊರಡಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post