ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕೋವಿಡ್‌೧೯ ಮಾರ್ಗಸೂಚಿಗಳನ್ನು ಪಾಲಿಸುತ್ತಿರುವ ಜಿಲ್ಲಾ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪರಿಶೀಲನೆ ನಡೆಸಿದರು.


ನಗರದ ಸರ್ಕಾರಿ ಪ್ರೌಢಶಾಲೆ, ಜ್ಞಾನದೀಪ ಸೀನಿಯರ್ ಸೆಕೆಂಡರಿ ಸ್ಕೂಲ್, ಜಾವಳ್ಳಿ ಹಾಗೂ ಇತರೆ ಶಿವಮೊಗ್ಗ ನಗರ, ತಾಲೂಕುಗಳ ಸರ್ಕಾರಿ, ಖಾಸಗಿ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರು, ವಿದ್ಯಾರ್ಥಿಗಳು ಕೋವಿಡ್‌೧೯ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಪರೀಶೀಲಿಸಿದರು. ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಧರಿಸುವಂತೆ, ದೈಹಿಕ ಅಂತರ ಕಾಯ್ದುಕೊಳ್ಳುವಂತೆ, ಹ್ಯಾಂಡ್ ಸ್ಯಾನಿಟೈಸರ್ ಮಾಡುವಂತೆ, ಮನೆಯಿಂದಲೇ ಕುಡಿಯುವ ನೀರು, ಆಹಾರಗಳನ್ನು ತರುವಂತೆ ಮತ್ತು ತಮ್ಮ ಪಾಲಕರಿಂದ ಒಪ್ಪಿಗೆ ಪತ್ರ ಬರೆಸಿಕೊಂಡು ಶಾಲಾ ಮುಖ್ಯ ಶಿಕ್ಷಕರಿಗೆ ನೀಡುವಂತೆ ಸೂಚಿಸಿರುತ್ತಾರೆ.


ಪ್ರಾಂಶುಪಾಲರು-ಮುಖ್ಯಶಿಕ್ಷಕರಿಗೆ ಎಲ್ಲಾ ವಿದ್ಯಾರ್ಥಿಗಳ ಆಗಮನ, ನಿರ್ಗಮನದಲ್ಲಿ ದಟ್ಟಣೆಯಾಗದಂತೆ, ಎಲ್ಲಾ ವಿದ್ಯಾರ್ಥಿಗಳ ದೇಹದ ಉಷ್ಣತೆಯನ್ನು ಪರೀಕ್ಷಿಸಿ, ಹ್ಯಾಂಡ್ ಸ್ಯಾನಿಟೈಜರ್ ನೀಡುವಂತೆ, ಪ್ರತೀ ಬೆಂಚುಗಳಿಗೆ ೨ ವಿದ್ಯಾರ್ಥಿಗಳನ್ನು ಮಾತ್ರ ಕೂರಿಸುವ ವ್ಯವಸ್ಥೆ ಮಾಡುವಂತೆ, ಶೌಚಾಲಯದಲ್ಲಿ ನೀರು, ಸೋಪು, ಸ್ಯಾನಿಟೈಜರ್ ವ್ಯವಸ್ಥೆ ಮಾಡುವಂತೆ ಹಾಗೂ ಪ್ರತೀ ಶಾಲೆಯಲ್ಲಿ ನೋಡಲ್ ಅಧಿಕಾರಿಯನ್ನು ನೇಮಿಸಿ ಕೋವಿಡ್‌೧೯ರ ಮಾರ್ಗಸೂಚಿಗಳು ಪಾಲನೆಯಾಗುತ್ತಿರುವ ಬಗ್ಗೆ ಪ್ರತಿ ದಿನ ಸಂಜೆ ವರದಿ ನೀಡುವಂತೆ ಸೂಚಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















