ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಟ್ಯಾಂಕ್ ಮೊಹಲ್ಲಾದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಕೇಸರಿ ಪಡೆ ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಪೊಲೀಸರ ತತಕ್ಷಣದ ಕ್ರಮದಿಂದಾಗಿ ಪರಿಸ್ಥಿತಿ ತಿಳಿಗೊಂಡಿದೆ.
ವಿಸರ್ಜನಾ ಪೂರ್ವ ಮೆರವಣಿಗೆ ನಡೆಯುವ ವೇಳೆ ಇಲ್ಲಿನ ಪ್ರಾರ್ಥನಾ ಮಂದಿರದ ಬಳಿಯಲ್ಲಿ ಪೇಪರ್ ಬ್ಲಾಸ್ಟ್ ಮಾಡುವ ವಿಚಾರದಲ್ಲಿ ವಾಗ್ವಾದ ನಡೆದಿದೆ. ತತಕ್ಷಣವೇ ಎಚ್ಚೆತ್ತ ಪೊಲೀಸರು ಹೆಚ್ಚಿನ ಬಂದೋಬಸ್ತ್ ಕಲ್ಪಿಸಿ ಪರಿಸ್ಥಿತಿಯಲ್ಲಿ ತಿಳಿಗೊಳಿಸಿದರು.
ಖುದ್ಧು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, Mithunkumar ಎಎಸ್’ಪಿ ಅನಿಲ್ ಕುಮಾರ್, ಡಿವೈಎಸ್’ಪಿ ಬಾಲರಾಜ್ ಅವರುಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಸದ್ಯ ಪರಿಸ್ಥಿತಿ ತಿಳಿಯಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ.
Also read: ಸನಾತನ ಧರ್ಮದ ವಿರುದ್ಧ ಹೇಳಿಕೆ ಹಿನ್ನೆಲೆ: ಡಿಎಂಕೆ ನಾಯಕ ಉದಯ ನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post