ಕಲ್ಪ ಮೀಡಿಯಾ ಹೌಸ್ | ರಿಪ್ಪನ್’ಪೇಟೆ |
ಇತ್ತೀಚೆಗಷ್ಟೇ ವಿವಾಹವಾಗಿದ್ದ ಯುವತಿಯೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ದುರಂತ ಘಟನೆ ಪಟ್ಟಣದಲ್ಲಿ ನಡೆದಿದೆ.
ಇಲ್ಲಿನ ಶಬರೀಶ ನಗರದಲ್ಲಿ ಘಟನೆ ನಡೆದಿದ್ದು, ಮೃತ ಯುವತಿಯನ್ನು ಮಧುರ(31) ಎಂದು ಗುರುತಿಸಲಾಗಿದೆ.
Also Read: ಹಮಾಸ್-ಇಸ್ರೇಲ್ ನಡುವೆ ಮಿಸೈಲ್ ದಾಳಿ | 300ಕ್ಕೂ ಹೆಚ್ಚು ಜನರ ದೇಹ ಛಿದ್ರ ಛಿದ್ರ
ಈಕೆ ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಬೆಳಗ್ಗೆ ಸಾಗರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಾಳಗುಪ್ಪದ ತಾಯಿ ಮನೆಗೆ ವಾಪಾಸ್ ಆಗಿದ್ದರು.
ಆದರೆ, ಸಂಜೆ ವೇಳೆ ಮತ್ತೆ ತಲೆ ನೋವು, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದರು.
ನಂತರ ವೈದ್ಯರ ಸಲಹೆಯಂತೆ ಬೆಳಗ್ಗೆ 5 ಗಂಟೆಗೆ ಸಾಗರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಈಕೆ ಕಳೆದ 6 ತಿಂಗಳ ಹಿಂದಷ್ಟೆ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಮಂಜುನಾಥ ಎಂಬುವವರೊಂದಿಗೆ ಇವರು ಸಪ್ತಪದಿ ತುಳಿದಿದ್ದರು. ಇದೀಗ ಶಬರೀಶ ನಗರದಲ್ಲಿ ನೀರವಮೌನ ಆವರಿಸಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇಂದು ಮಧ್ಯಾಹ್ನ ರಿಪ್ಪನ್’ಪೇಟೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















