ಸಾಗರ: ಆನಂದಪುರಂ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಇಲ್ಲಿನ ಬೈರಾಪುರ ಎಂಬಲ್ಲಿ ಕಾರು ಅಪಘಾತಕ್ಕೀಡಾಗಿದ್ದು, ಅಪಘಾತದ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿದ್ದ ಕಟ್ಟೆಯೊಂದರ ನಡುವೆ ಸಿಲುಕಿಕೊಂಡಿದೆ.
ಬಾಲ ಸಾಹೇಬ್ ಕೃಷ್ಣ ದೇಸಾಯಿ(48) ಎಂಬುವವರು ಅಪಘಾತದಲ್ಲಿ ಮೃತಪಟ್ಟಿದ್ದು, ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದಟ್ಟ ಮಂಜು ಕವಿದಿದ್ದ ಕಾರಣ ರಸ್ತೆ ಕಾಣದೇ ಇದ್ದುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.


















