ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಲ್ಲಿ ರೋಬೊಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ರಾಜ್ಯದ ವಿವಿಧ ಎಂಜಿನಿಯರಿಂಗ್ #Engineering ಕಾಲೇಜಿನಿಂದ ಆಗಮಿಸಿದ್ದ ವಿದ್ಯಾರ್ಥಿಗಳ ತಂಡದ ರೊಬೊಗಳು #Robot ನಾ ಮುಂದು, ತಾ ಮುಂದು ಎಂಬ ಸ್ಪರ್ಧೆಯಲ್ಲಿ ಮುಳುಗಿತ್ತು. ನೆರೆದಿದ್ದ ವಿದ್ಯಾರ್ಥಿಗಳ ಚಿತ್ತ ಸ್ವಲ್ಪವೂ ಕದಲದಂತೆ ತನ್ನಡೆಗೆ ಹಿಡಿದಿಟ್ಟುಕೊಳ್ಳುವಲ್ಲಿ ವಿವಿಧ ವಿನ್ಯಾಸದ ರೋಬೊಗಳು ಸಫಲವಾಗಿದ್ದವು.
ನಗರದ ಜೆಎನ್’ಎನ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಎಂಜಿನಿಯರಿಂಗ್ #Communication ವಿಭಾಗ, ಐಇಇಇ ವಿದ್ಯಾರ್ಥಿ ಘಟಕದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರಮಟ್ಟದ ತಾಂತ್ರಿಕ ಸ್ಪರ್ಧೆ ʼಪ್ಲಾಸ್ಮಾ-2024ʼ ಕಾರ್ಯಕ್ರಮ ರೊಬೊಗಳ ಜಿದ್ದಾಜಿದ್ದಿಗೆ ಸಾಕ್ಷಿಯಾಗಿತ್ತು.
ಕರ್ನಾಟಕದ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ 205 ಕ್ಕು ಹೆಚ್ಚು ತಂಡಗಳು ರೋಬೊಟಿಕ್ಸ್ ಸ್ಪರ್ಧೆಗಳಾದ ಡೆಡ್ ರೊಬೊ ರೇಸ್, ರೊಬೊ ಸಾಸರ್, ಸುಮೊ ವಾರ್, ಲೈನ್ ಫಾಲೊವರ್, ಹ್ಯಾಕಥಾನ್ನಲ್ಲಿ ಉತ್ಸುಕರಾಗಿ ಪಾಲ್ಗೊಂಡರು.
Also read: ಈಶ್ವರಪ್ಪರಿಗೆ ಮತ್ತೊಂದು ಸಂಕಷ್ಟ | ಕೋಟೆ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಇಂದಿನ ಯುವ ಸಮೂಹ ಕೈಗಾರಿಕರಣದ ನಾಲ್ಕನೇ ತಲೆಮಾರಿನಲ್ಲಿದೆ. ಅಂತಹ ಆಧುನಿಕ ತಲೆಮಾರಿಗೆ ಪ್ಲಾಸ್ಮಾದ ಸಿದ್ದಾಂತಗಳು ಹೆಚ್ಚು ಹತ್ತಿರವಾಗಿದೆ. ತಾಂತ್ರಿಕತೆಯ ಅಗ್ರಗಣ್ಯ ಸ್ಥಾನ ಪಡೆಯುತ್ತಿರುವ ರೊಬೊಗಳು, ಮನುಷ್ಯನ ಶಸ್ತ್ರ ಚಿಕಿತ್ಸೆ ಮಾಡುವಲ್ಲಿ ಯಶಸ್ವಿಯಾಗಿದೆ. ಜೊತೆಯಲ್ಲಿ ಶೀಘ್ರ ಗುಣಮುಖ ಹೊಂದುವ ಅವಕಾಶಗಳ ಮೂಲಕ, ರೊಬೊಗಳು ಆರೋಗ್ಯ ಕ್ಷೇತ್ರದಲ್ಲಿ ಮತ್ತಷ್ಟು ಚಾಪನ್ನು ಮೂಡಿಸಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎನ್‌ಇಎಸ್ ಸಂಸ್ಥೆಯ ಖಜಾಂಚಿಗಳಾದ ಡಿ.ಜಿ.ರಮೇಶ್, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಸಂಯೋಜಕರಾದ ಅನಿಲ್ ಕುಮಾರ್.ಜೆ, ಪ್ರದೀಪ್.ಎಸ್.ಸಿ, ಪ್ರಶಾಂತ್.ಜಿ.ಎಸ್, ವಿದ್ಯಾರ್ಥಿ ಸಂಯೋಜಕರಾದ ರಾಹುಲ್, ರೋಹಿತ್, ಚಿರಾಗ್, ಸುಶಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post