ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾರ್ವಜನಿಕ ಆಡಳಿತದ ಮೂರು ಅಂಗಗಳಿಗೆ ಸಹಕಾರ, ಸಲಹೆ ನೀಡುವ ಹಾಗೂ ಸಾರ್ವಜನಿಕ ಆಡಳಿತ ಸುಗಮಗೊಳಿಸುವಲ್ಲಿ ವಕೀಲ ಸಮುದಾಯ ಸದಾ ಮುಂದಿರುತ್ತದೆ ಎಂದು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ #Deputy Lokayuktha K N Panindra ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಘಟಕ ಮತ್ತು ಜಿಲ್ಲಾ ವಕೀಲರ ಸಂಘ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರ ಕುರಿತು ಏರ್ಪಡಿಸಲಾಗಿದ್ದ ವಕೀಲರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟು ಮಾತನಾಡಿದರು.

ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಹೆಚ್ಚಿದೆ. ನಮ್ಮ ದೇಶದಲ್ಲಿ ವಕೀಲರು, ನ್ಯಾಯಾಧೀಶ ಸಂಖ್ಯೆ ಕಡಿಮೆ ಇದೆ. ಆದರೂ ವ್ಯವಸ್ಥೆ ಕುಸಿಯದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಈ ಮೂರು ಅಂಗಗಳು ಸೇರಿದರೆ ಮಾತ್ರ ಸಾರ್ವಜನಿಕ ಆಡಳಿತ ಸಾಧ್ಯ.

Also read: ಟಾಪ್ 10 ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ಗೆ ಎರಡನೇ ಸ್ಥಾನ
ಶಾಸಕಾಂಗ ಕಾನೂನು ರಚಿಸಿದರೆ, ಕಾರ್ಯಾಂಗ ಕಾನೂನು, ಸರ್ಕಾರ ರೂಪಿಸುವ ಯೋಜನೆಗಳು, ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತದೆ. ಆದರೆ ನ್ಯಾಯಾಂಗಕ್ಕೆ ಈ ಎಲ್ಲವನ್ನೂ ವಿಶ್ಲೇಷಣೆ ಮಾಡುವ ಶಕ್ತಿ ಇದೆ. ಯಾವ ಹೊಸ ಕಾನೂನು ಬೇಕು, ಯಾವುದು ಬೇಡ ಎಂಬ ಸಲಹೆಗಳನ್ನು ನೀಡುವ ಶಕ್ತಿ ವಕೀಲ ಸಮುದಾಯಕ್ಕಿದೆ. ವ್ಯಾಖ್ಯಾನ, ವಿಶ್ಲೇಷಣೆ ಮತ್ತು ಉತ್ತಮ ತೀರ್ಪುಗಳಿಗೆ ಮುಖ್ಯ ಕಾರಣಕರ್ತರು ವಕೀಲರು. ಸರ್ಕಾರದ ನಿಯಮಾವಳಿಗಳು, ನಿರ್ದೇಶನ, ಒಟ್ಟಾರೆ ಚಟುವಟಿಕೆಗಳನ್ನು ಪ್ರಶ್ನೆ ಮಾಡುತ್ತಿರುವುದು ವಕೀಲ ಸಮುದಾಯ. ಶಾಸಕಾಂಗ ಪ್ರಕ್ರಿಯೆಯಲ್ಲಿ ವಕೀಲರ ಕೊಡುಗೆ ಮಹತ್ವದ್ದಾಗಿದ್ದು, ಕಾರ್ಯಾಂಗದ ಲೋಪಗಳನ್ನೂ ಪ್ರಶ್ನಿಸುವ ಮೂಲಕ ಸರಿಪಡಿಸುವ ಕೆಲಸವನ್ನು ಈ ಸಮುದಾಯ ಮಾಡುತ್ತಿದೆ.

ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-14 ರ ಎನ್.ಆರ್. ಲೋಕಪ್ಪ, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-05ರ ಜಿ.ವಿ. ವಿಜಯನಂದ, ಸಿವಿಲ್ ನ್ಯಾಯಾಧೀಶರು ಮತ್ತು ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿಯಾದ ಕಿರಣ್ ಪಿ.ಎಂ. ಪಾಟೀಲ್ ಪಾಲ್ಗೊಂಡಿದ್ದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್, ವಿಶೇಷ ಸಾರ್ವಜನಿಕ ಅಭಿಯೋಜಕರಾದ ಸುಂದರರಾಜ್ ಎಂ.ಡಿ, ಜಿಲ್ಲಾ ವಕೀಲರ ಸಂಘದ ಪ್ರಧಾನ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಎಸ್ ಎ, ನ್ಯಾಯಾಧೀಶರು, ವಕೀಲರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post