ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ರೌಡಿ ಶೀಟರ್ ಹಬೀಬುಲ್ಲಾ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಹಿನ್ನೆಲೆಯಲ್ಲಿ ಆತನ ಮೇಲೆ ಗುಂಡು ಹಾರಿಸಿರುವ ಘಟನೆ ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್’ನಲ್ಲಿ ನಡೆದಿದೆ.
ಉದ್ಯಮಿ ನಾಸೀರ್ ಖಾನ್ ಮೇಲೆ ಶಸ್ತಾçಸ್ತçಗಳಿಂದ ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿ ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮು ಎಂಬಾತನನ್ನು ಬಂಧಿಸಲು ಇಂದು ಮುಂಜಾನೆ ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಆತನ ಪರಾರಿಯಾಗಲು ಯತ್ನಿಸಿದ್ದಾನೆ.

ಹಬೀಬುಲ್ಲಾನ ಬಲಗಾಲಿನ ಪಾದಕ್ಕೆ ಗುಂಡು ತಗುಲಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಜಯಪ್ಪ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















Discussion about this post