ಸಾಗರ: ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 2 ಕೋಟಿ ರೂ. ಹಣವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಸಾಗರ ತಾಲೂಕಿನ ಅಮಟೆಕೊಪ್ಪದ ಬಳಿ ಎರ್ಟಿಗಾ ಕಾರಿನಲ್ಲಿ 2 ಕೋಟಿ ರೂಪಾಯಿ ಹಣ ಕೊಂಡೊಯ್ಯುತ್ತಿದ್ದ ವ್ಯಕ್ತಿಗಳನ್ನು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
ಅನುಮಾನ ಬಂದ ಹಿನ್ನೆಲೆಯಲ್ಲಿ ಕಾರನ್ನು ತಡೆದು, ಹಣ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವ್ಯಕ್ತಿ ಪ್ರಗತಿ ಕೃಷ್ಣ ಬ್ಯಾಂಕಿನ ಮ್ಯಾನೇಜರ್ ಎಂದು ಹೇಳಲಾಗಿದೆ.
ಸೂಕ್ತ ದಾಖಲೆ ಇಲ್ಲದೇ 2 ಕೋಟಿ ಮೊತ್ತದ ಹಣದ ಕುರಿತಾಗಿ ಅನುಮಾನ ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳಿಗೆ ಒಪ್ಪಿಸಲಾಗುವುದೆಂದು ತಿಳಿದುಬಂದಿದೆ.
Discussion about this post