ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಉತ್ತಮ ತತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮೌಲ್ಯಯುತ ಬದುಕು ರೂಢಿಸಿಕೊಂಡಿರುವ ಮಾದರಿ ವ್ಯಕ್ತಿ ಎಸ್.ರುದ್ರೇಗೌಡ ಅವರದ್ದು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್ ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ರುದ್ರೇಗೌಡ ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ಶುಭಾಶಯ ಕೋರಿ ಮಾತನಾಡಿ, ಕೆಪಿಎಸ್‌ಸಿ ಸದಸ್ಯರು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಸಂದರ್ಭಗಳಲ್ಲಿ ಮೌಲ್ಯಗಳಿಗೆ ಒತ್ತು ಕೊಟ್ಟು ಹುದ್ದೆಗೆ ನ್ಯಾಯ ಒದಗಿಸಿದವರು ಎಸ್.ರುದ್ರೇಗೌಡರು ಎಂದು ತಿಳಿಸಿದರು.
Also read: ಸಂಘ ಸಂಸ್ಥೆ ಮುಖಾಂತರ ಸಾಮಾಜಿಕ ಸೇವೆ ಸಲ್ಲಿಸಿ | ಕಿರಣ್ ಕುಮಾರ್ ಸಲಹೆ
ಶಿವಮೊಗ್ಗ ಜಿಲ್ಲಾ ಅಭಿವೃದ್ಧಿ ವೇದಿಕೆ ಅಧ್ಯಕ್ಷರಾಗಿ ಮೆಡಿಕಲ್ ಕಾಲೇಜು ಶಿವಮೊಗ್ಗಕ್ಕೆ ಬರುವಂತೆ ಸದಸ್ಯರೊಡನೆ ಸೇರಿ ಪ್ರಮುಖ ಪಾತ್ರ ವಹಿಸಿದ್ದರು. ಬೇರೆ ಸಂಸ್ಥೆಯಲ್ಲಿ ಕೆಲಸ ಆರಂಭಿಸಿ ನಂತರ ಹಂತ ಹಂತವಾಗಿ ಬೆಳೆದು ಕೈಗಾರಿಕೋದ್ಯಮಿಯಾಗಿ ರೂಪುಗೊಂಡಿರುವ ರುದ್ರೇಗೌಡರು ಯುವಜನರಿಗೆ ಮಾದರಿ ಎಂದರು.
ಕೈಗಾರಿಕಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರೀಯ ಮಟ್ಟದ ಪುರಸ್ಕಾರಗಳನ್ನು ಪಡೆದಿದ್ದಾರೆ. ಫೌಂಡ್ರಿ ಕ್ಷೇತ್ರದಲ್ಲಿ ಮಹತ್ತರ ಕೆಲಸಗಳನ್ನು ಮಾಡಿದ್ದಾರೆ. ಕೈಗಾರಿಕೆ ಸ್ಥಾಪಿಸುವ ಮೂಲಕ ಸಾವಿರಾರು ಜನರ ಬದುಕಿಗೆ ಬೆಳಕಾಗಿದ್ದಾರೆ. ನಾಯಕತ್ವ ಗುಣ ಹೊಂದಿರುವ ರುದ್ರೇಗೌಡರು ಕೈಗಾರಿಕೋದ್ಯಮದ ಜತೆಯಲ್ಲಿ ರಾಜಕೀಯ ಕ್ಷೇತ್ರಕ್ಕೂ ಕಾಲಿಟ್ಟು ಶಿವಮೊಗ್ಗದ ಅಭಿವೃದ್ಧಿಯಲ್ಲಿ ಕೆಲಸ ಮಾಡಿದ್ದಾರೆ. ಅನೇಕ ಮಹತ್ತರ ಸೇವಾ ಕಾರ್ಯಗಳನ್ನು ಪರಿಷತ್ ಅವಧಿಯಲ್ಲಿ ಮಾಡಿದ್ದಾರೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















