ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿ ಹಾಗೂ ಕೋವಿಡ್ ಗೊಸ್ಕರ್ ಕಾರ್ಯ ನಿರ್ವಹಿಸುತ್ತಿರುವವರನ್ನು ಫ್ರಂಟ್ ಲೈನ್ ವಾರಿಯರ್ಸ್ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಹಲವಾರು ಅಧಿಕಾರಿಗಳು, ನಮ್ಮ ಇಲಾಖೆಯ ಸಿಬ್ಬಂದಿ ಕೋವಿಡ್‌ಗೋಸ್ಕರ್ ಕಾರ್ಯ ನಿರ್ವಹಿಸುತ್ತಿರುವವರನ್ನು ಫ್ರಂಟ್ ಲೈನ್ ವಾರಿಯರ್ಸ್ ಪಟ್ಟಿಯಲ್ಲಿ ಸೇರಿಸುವ ಕುರಿತು ವಿಚಾರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ನಮ್ಮ ಇಲಾಖೆಯಿಂದ ಈ ಸಂಬಂಧ ಒಂದು ಆದೇಶ ಹೊರಡಿಸಲಾಗಿದೆ. ಇನ್ನೂ ಅದರ ಬಗ್ಗೆ ಗೊಂದಲ ಇದ್ದರೆ ಅದನ್ನು ಕೂಡ ಬಗೆಹರಿಸಲಾಗುವುದು ಮತ್ತು ಉಳಿದ ಇಲಾಖೆಗಳಲ್ಲಿ ನೀಡುವಂತಹ ಎಲ್ಲ ವಿಶೇಷ ಸೌಲಭ್ಯಗಳನ್ನು ನಮ್ಮ ಇಲಾಖೆಯಿಂದ ಕೈಗೊಳ್ಳಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post