ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸುವರ್ಣ ಸಾಂಸ್ಕೃತಿಕ ಭವನದಲ್ಲಿ ನಡೆದ ಶ್ರೀ ರೋಜಾ ಷಣ್ಮುಗಂ ಗುರೂಜಿ ಅವರ ನೆನಪು ನುಡಿ ನಮನ ಕಾರ್ಯಕ್ರಮವನ್ನು ನಾಡೋಜ ಹಾಗೂ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ರೋಜಾ ಷಣ್ಮುಖ ಅವರ ಅನೇಕ ಸಮಾಜಮುಖಿ ಕಾರ್ಯಗಳ ಬಗ್ಗೆ ಹಲವು ಜೀವನದ ಪ್ರಮುಖ ಘಟ್ಟಗಳ ನೆನಪುಗಳನ್ನು ಮೆಲುಕು ಹಾಕುವುದರ ಮೂಲಕ ಗುರುಗಳಿಗೆ ನುಡಿ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಭಾರತೀಯ ಅಯ್ಯಪ್ಪ ಸೇವಾ ಸಮಾಜದ ರಾಷ್ಟ್ರೀಯ ಅಧ್ಯಕ್ಷ ಬಳ್ಳೂರ ಉಮೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಶ್ರೀಕಾಂತ್, ಸಮಿತಿ ಸಂಯೋಜಕ ಸಮನ್ವಯ ಕಾಶಿ ಹಾಗೂ ಕುಟುಂಬ ವರ್ಗದವರು ಮತ್ತು ಶ್ರೀಗಳ ಅಪಾರ ಭಕ್ತ ಸಮೂಹ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post