No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಎನ್‌ಸಿಟಿಇ ಮಾನ್ಯತೆ ಇಲ್ಲ!

ಉಳ್ಳೂರಿನ ಸಾಗರ ಗಂಗೋತ್ರಿ ಕಾಲೇಜು ಪ್ರವೇಶಾತಿ, ವಿದ್ಯಾರ್ಥಿಗಳ ವಿವೇಚನೆಗೆ ಬಿಟ್ಟದ್ದು: ಕುವೆಂಪು ವಿವಿ

kalpa News by kalpa News
August 28, 2026
in News
0
Shivamogga Sagar gangothri College No NCTE Recognition
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಶಿವಮೊಗ್ಗ ಜಿಲ್ಲೆಯ (Shivamogga) ಸಾಗರ ತಾಲೂಕಿನ ಉಳ್ಳೂರಿನಲ್ಲಿರುವ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (NCTE) ಮಾನ್ಯತೆ 2023-24ನೇ ಶೈಕ್ಷಣಿಕ ಸಾಲಿನಿಂದ ರದ್ದಾಗಿದ್ದು, ಮುಂಬರುವ ಶೈಕ್ಷಣಿಕ ಸಾಲಿನ ಬಿ.ಇಡಿ. ಕೋರ್ಸ್‌ಗೆ ಈ ಕಾಲೇಜಿನಲ್ಲಿ ಪ್ರವೇಶ ಪಡೆಯುವುದು ಸಂಪೂರ್ಣವಾಗಿ ವಿದ್ಯಾರ್ಥಿಗಳ ವಿವೇಚನೆಗೆ ಬಿಟ್ಟ ವಿಚಾರವಾಗಿದೆ ಎಂದು (Kuvempu University) ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ತಿಮ್ಮರಾಯಪ್ಪ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕಾಲೇಜಿನ ಎನ್‌ಸಿಟಿಇ ಮಾನ್ಯತೆ ಮತ್ತು ಕುವೆಂಪು ವಿಶ್ವವಿದ್ಯಾಲಯದ ಸಂಯೋಜನೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.

2023-24ರಿಂದ ಸಂಯೋಜನೆ ಸಿಕ್ಕಿಲ್ಲ

ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯವು ನಿಗದಿತ ಸಮಯದಲ್ಲಿ ಅಗತ್ಯ ಅರ್ಜಿಯನ್ನು ಸಲ್ಲಿಸದ ಹಿನ್ನೆಲೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸಂಯೋಜನೆ ದೊರೆತಿರಲಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎನ್‌ಸಿಟಿಇ ಮಾನ್ಯತೆ ಇಲ್ಲದ ಕಾರಣದಿಂದ ವಿಶ್ವವಿದ್ಯಾಲಯದ ಸಂಯೋಜನೆ ದೊರೆತಿರಲಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.PES Shivamogga

ಅದೇ ರೀತಿ, 2025-26 ಹಾಗೂ 2026-27ನೇ ಶೈಕ್ಷಣಿಕ ಸಾಲುಗಳಲ್ಲಿಯೂ ಕಾಲೇಜು ಯುಯುಸಿಎಂಎಸ್ (UUCMS) ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ, ಸ್ಥಳೀಯ ತಪಾಸಣಾ ಸಮಿತಿಯ ಮೂಲಕ ನಿಯಮಾನುಸಾರ ಸಂಯೋಜನಾ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಕುವೆಂಪು ವಿಶ್ವವಿದ್ಯಾಲಯದಿಂದ ಸಂಯೋಜನಾ ಆದೇಶ ಪಡೆಯುವಲ್ಲಿ ಯಶಸ್ವಿಯಾಗಿಲ್ಲ ಎಂದು ಮಾಹಿತಿ ನೀಡಲಾಗಿದೆ.

Also Read>> ಇಂದು ಲೋಕಸಭೆ ಚುನಾವಣೆ ನಡೆದರೆ ಮೋದಿ 4.0ಗೆ ಸ್ಪಷ್ಟ ಮುನ್ನಡೆ! NDAಗೆ ಎಷ್ಟು ಸ್ಥಾನ?

ಹೈಕೋರ್ಟ್ ಮಧ್ಯಂತರ ಆದೇಶದಡಿ ಪರೀಕ್ಷೆ ಮತ್ತು ಪ್ರವೇಶಾತಿಗೆ ಅವಕಾಶ

ಈ ನಡುವೆ, ಕರ್ನಾಟಕ ಹೈಕೋರ್ಟ್‌ನ 2026ರ ಜೂನ್ 24ರ ಮಧ್ಯಂತರ ಆದೇಶ (WP. 8665/2025)ದ ಅನ್ವಯ ಕಾಲೇಜಿಗೆ ಪರೀಕ್ಷೆ ನಡೆಸಲು ಮತ್ತು ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಮತಿ ಲಭಿಸಿದೆ.Shivamogga Sagar gangothri College No NCTE Recognition 2

ಆದರೆ, ಈ ಅನುಮತಿಯು ನ್ಯಾಯಾಲಯದ ಅಂತಿಮ ತೀರ್ಪಿಗೆ ಬದ್ಧವಾಗಿರುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಅಂತಿಮ ತೀರ್ಪಿನಲ್ಲಿ ಮಧ್ಯಂತರ ಆದೇಶ ರದ್ದಾದರೆ ಏನು?

ಮುಂದಿನ ದಿನಗಳಲ್ಲಿ ಹೈಕೋರ್ಟ್ ಅಂತಿಮ ತೀರ್ಪು ನೀಡುವ ಸಂದರ್ಭದಲ್ಲಿ ಪ್ರಸ್ತುತ ಇರುವ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದರೆ, ಅದರ ಪರಿಣಾಮ ಕಾಲೇಜು ಮತ್ತು ವಿದ್ಯಾರ್ಥಿಗಳ ಮೇಲೆ ಬೀಳುವ ಸಾಧ್ಯತೆ ಇದೆ ಎಂದು ಪ್ರಕಟಣೆಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಒಂದು ವೇಳೆ ಅಂತಿಮ ತೀರ್ಪಿನಲ್ಲಿ ಮಧ್ಯಂತರ ಆದೇಶ ರದ್ದಾದಲ್ಲಿ, “ಸಂಸ್ಥೆಯಾಗಲೀ, ವಿದ್ಯಾರ್ಥಿಗಳಾಗಲೀ ಸಮತೆಯ ಹಕ್ಕು ಸಾಧಿಸಲು ಸಾಧ್ಯವಿಲ್ಲ” ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇದರಿಂದ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ತಮ್ಮ ಬಿ.ಇಡಿ. ಪದವಿ ಮತ್ತು ಅದರ ಮಾನ್ಯತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆಯಿದ್ದು, ಪದವಿಯ ಮಾನ್ಯತೆ ಕಳೆದುಕೊಳ್ಳುವ ಆತಂಕವೂ ಎದುರಾಗಬಹುದು ಎಂಬ ಅಂಶವನ್ನು ಪ್ರಕಟಣೆಯಲ್ಲಿ ಪರೋಕ್ಷವಾಗಿ ಎಚ್ಚರಿಸಲಾಗಿದೆ.

Shivamogga : ವಿದ್ಯಾರ್ಥಿಗಳು ಎಚ್ಚರಿಕೆಯಿಂದ ನಿರ್ಧರಿಸುವಂತೆ ಸೂಚನೆ

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮುಂಬರುವ ಶೈಕ್ಷಣಿಕ ಸಾಲಿಗೆ ಬಿ.ಇಡಿ. ಕೋರ್ಸ್‌ಗೆ ಪ್ರವೇಶ ಪಡೆಯಬೇಕೇ ಅಥವಾ ಬೇಡವೇ ಎಂಬುದು ಸಂಪೂರ್ಣವಾಗಿ ವಿದ್ಯಾರ್ಥಿಗಳ ವಿವೇಚನೆಗೆ ಬಿಟ್ಟ ವಿಷಯವಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯ ಸ್ಪಷ್ಟಪಡಿಸಿದೆ.

ಎನ್‌ಸಿಟಿಇ ಮಾನ್ಯತೆ, ವಿಶ್ವವಿದ್ಯಾಲಯದ ಸಂಯೋಜನೆ ಮತ್ತು ಹೈಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣದ ಅಂತಿಮ ತೀರ್ಪು ಸೇರಿದಂತೆ ಎಲ್ಲ ಅಂಶಗಳನ್ನು ಪರಿಶೀಲಿಸಿದ ನಂತರವೇ ವಿದ್ಯಾರ್ಥಿಗಳು ಪ್ರವೇಶಾತಿ ಕುರಿತು ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂಬ ಸಂದೇಶವನ್ನು ಕುವೆಂಪು ವಿಶ್ವವಿದ್ಯಾಲಯದ ಪ್ರಕಟಣೆ ನೀಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kumadvathi College Shikariura

Kalpa News Advertising DisclaimerKalahamsa Infotech private limited

Tags: Kuvempu UniversityNCTEಕುವೆಂಪು ವಿಶ್ವವಿದ್ಯಾಲಯರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿಶಂಕರಘಟ್ಟಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂದು ಲೋಕಸಭೆ ಚುನಾವಣೆ ನಡೆದರೆ ಮೋದಿ 4.0ಗೆ ಸ್ಪಷ್ಟ ಮುನ್ನಡೆ! NDAಗೆ ಎಷ್ಟು ಸ್ಥಾನ?

Next Post

ಹೊಸಪೇಟೆ–ಅರಸೀಕೆರೆ ನಡುವೆ ವಿಶೇಷ ಅನ್‌ರಿಸರ್ವ್ಡ್ ಡೆಮು ರೈಲು ಸೇವೆ : ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

kalpa News

kalpa News

Next Post
DEMU Train service between hosapete-arsikere

ಹೊಸಪೇಟೆ–ಅರಸೀಕೆರೆ ನಡುವೆ ವಿಶೇಷ ಅನ್‌ರಿಸರ್ವ್ಡ್ ಡೆಮು ರೈಲು ಸೇವೆ : ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL