ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಜೋಗ ಸೇರಿದಂತೆ ತಾಲೂಕಿನ ಪ್ರವಾಸೋದ್ಯಮದೊಂದಿಗೆ ಸಾಗರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸಾಗರ ನಗರಸಭೆ ಪೌರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜೋಗವನ್ನು 120 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗುತ್ತಿದೆ. ಜೋಗವನ್ನು ಸಾವಿರಾರು ಪ್ರವಾಸಿಗರು ವೀಕ್ಷಿಸುವಂತೆ ಅನುಕೂಲ ಮಾಡಿಕೊಡಲಾಗುವುದು. ಜೋಗ ಅತ್ಯುತ್ತಮ ಪ್ರವಾಸಿತಾಣವನ್ನಾಗಿಸಲು ಪಣ ತೊಡಲಾಗಿದೆ. ಸಮಗ್ರ ಸಾಗರ ಅಭಿವೃದ್ಧಿಗೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಸಾಗರದ ರಸ್ತೆ ಅಭಿವೃದ್ಧಿಗೆ ತಕ್ಷಣವೇ, 30 ಕೋಟಿ ರೂ. ಬಿಡುಗಡೆ ಮಾಡುವ ಭರವಸೆ ನೀಡಿದರು.
ಇನ್ನು, ಕೋವಿಡ್19ನಿಂದಾಗಿ ರಾಜ್ಯದ ಹಣಕಾಸಿನ ಪರಿಸ್ಥಿತಿ ಹೇಗಿದೆ ಎಂಬುದು ನಿಮಗೆ ತಿಳಿದಿದೆ. ಕುಡಿಯುವ ನೀರು ಸರಬರಾಜು ಪ್ರಸ್ತಾವನೆ ಈಡೇರಿಸುತ್ತೇವೆ. ಬಡವರಿಗೆ ಮನೆ ಕಟ್ಟಿಸುವ ಯೋಜನೆ ಪ್ರಸ್ತಾವನೆ ಈಡೇರಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post