ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಾಗರ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ಸಾಗರ ಟೌನ್ ಎಳ್ಳಾರೆ ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನಲೆಯಲ್ಲಿ ಸಾಗರ ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಟಿ.ಎಂ. ನಾಗರಾಜ್ ನೇತೃತ್ವದ ತಂಡ ದಾಳಿ ನಡೆಸಿ ಗಾಂಜಾ ಮಾರುತ್ತಿದ್ದ ರಾಘವೇಂದ್ರ, ರಮೇಶ್, ಪ್ರವೀಣ್ ಅವರನ್ನು ಬಂಧಿಸಲಾಗಿದೆ.
Also read: ಸಾತ್ವಿಕರ ಸಹಕಾರದಲ್ಲಿ ಧರ್ಮದ ಉಳಿವಿಗೆ ಮಠಗಳು ಮುಂದಾಗಲಿ: ಭಂಡಾರಕೇರಿ ಶ್ರೀ ಕರೆ
ಬಂಧಿತರಿಂದ ಸುಮಾರು 23 ಸಾವಿರ ರೂ. ಮೌಲ್ಯದ 790 ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡು ಎನ್.ಡಿ.ಪಿ.ಎಸ್. ಕಾಯ್ದೆ ರೀತ್ಯ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















