ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚನ್ನಕೊಪ್ಪದಲ್ಲಿ ನಡೆದಿದೆ.

ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಕಾರು ಎದುರಿನಿಂದ ಬಂದ ವಾಹನವನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Also read: ಶಿಕ್ಷಕಿಯ ಮಾಂಗಲ್ಯ ಸರ ಕಿತ್ತು ಪರಾರಿ: ದೂರು ದಾಖಲು
ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















