ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ 29 ವರ್ಷದ ಯುವಕ ಹೃದಯಾಘಾತದಿಂದ #HeartAttack ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಲಸಗೋಡು ಗ್ರಾಮದ ಸಮೀಪ ನಡೆದಿದೆ.
ದಾವಣಗೆರೆಯ ಬಸಾಪುರ ಗ್ರಾಮದ ವಾಸಿ ಕೆಂಪನಹಳ್ಳಿ ರವೀಂದ್ರ ರವರ ಹಿರಿಯ ಪುತ್ರ ಕೆ.ಆಕರ್ಷ್ (29) ಸ್ನೇಹಿತನ ಜೊತೆ ದ್ವಿಚಕ್ರ ವಾಹನದಲ್ಲಿ ದಾವಣಗೆರೆಯಿಂದ ಸಿಗಂದೂರು ದೇವಸ್ಥಾನಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಆಕರ್ಷ್, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಪ್ರಭಾ ಮಲ್ಲಿಕಾರ್ಜುನ ರವರ ಆಪ್ತ ಸಹಾಯಕ ಹರೀಶ್ ಬಸಾಪುರರ ಸಹೋದರನ ಪುತ್ರ ಎಂದು ತಿಳಿದುಬಂದಿದೆ.
ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post