ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಗರ ಹಾಗೂ ಹೊಸನಗರ ಎಪಿಎಂಸಿಗಳನ್ನು ಯಾವುದೇ ಕಾರಣಕ್ಕೂ ವಿಲೀನ ಮಾಡುವುದಿಲ್ಲ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ MLA Halappa ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಎರಡೂ ಎಪಿಎಂಸಿಗಳನ್ನು ವಿಲೀನ ಮಾಡಬಾರದು ಎಂಬ ಸಾರ್ವಜನಿಕರ ಅಭಿಪ್ರಾಯಕ್ಕೆ ಸರ್ಕಾರ ಮಣಿದಿದೆ. ಹೀಗಾಗಿ, ಈ ಪ್ರಸ್ತಾವನೆಯನ್ನು ಸರ್ಕಾರ ಕೈಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಎರಡೂ ಎಪಿಎಂಸಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಿಸಲಿವೆ. ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
Also read: ಜೈಲಿನಲ್ಲಿ ನವಜೋತ್ ಸಿಂಗ್ ಸಿಧು ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ? ಎಷ್ಟು ಸಂಬಳ ಗೊತ್ತಾ?
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಕೆ.ವಿ. ಅಣ್ಣಪ್ಪ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post