ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಾಗರದ ಗಣಪತಿ ಕೆರೆಯನ್ನು ಪ್ರವಾಸೋದ್ಯಮ ಇಲಾಖೆಯ ವ್ಯಾಪ್ತಿಗೆ ಸೇರಿಸುವ ಕುರಿತಾಗಿ ಯೋಜನಾ ವರದಿ ಸಿದ್ದಪಡಿಸಲು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಗಳಾದ ಪಂಕಜ್ ಕುಮಾರ್ ಪಾಂಡೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಕುರಿತಂತೆ ಶಾಸಕ ಎಚ್. ಹಾಲಪ್ಪ ಅವರು ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಹಿನ್ನೆಲೆಯಲ್ಲಿ ಯೋಜನಾ ವರದಿ ಸಿದ್ದಪಡಿಸಲು ಜಿಲ್ಲಾಧಿಕಾರಿಗಳಿಗೆ ಕಾರ್ಯದರ್ಶಿಯವರು ಸೂಚನೆ ನೀಡಿದ್ದಾರೆ.
ಇನ್ನು, ಶರಾವತಿ ಹಿನ್ನೀರಿನ ಮಟ್ಟವನ್ನು ಕಡಿಮೆ ಮಾಡಿ ಸೇತುವೆ ಕಾಮಗಾರಿಗೆ ಅನುವು ಮಾಡಿಕೊಡಬೇಕು ಎಂದು ಹಾಲಪ್ಪನವರು ಇಂಧನ ಸಚಿವ ಸುನೀಲ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿಂದು ಸಚಿವರನ್ನು ಭೇಟಿಯಾಗಿ ಮಾತನಾಡಿದ ಅವರು, ಶರಾವತಿ ಹಿನ್ನೀರಿನ ಪ್ರಮಾಣ ಹೆಚ್ಚಿರುವುದರಿಂದ ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿ ವಿಳಂಬವಾಗುತ್ತಿದ್ದು. ಜಲ ವಿದ್ಯುತ್ ಉತ್ಪಾದನೆ ಹೆಚ್ಚಿಸಿ, ನೀರಿನ ಮಟ್ಟ ಕಡಿಮೆ ಮಾಡಿ ಸೇತುವೆ ಕಾಮಗಾರಿಗೆ ಅನುವು ಮಾಡಿಕೊಡುವ ಬಗ್ಗೆ ಚರ್ಚಿಸಿದರು.
ವಿನಾಯಕ್ ರಾವ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post