ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಹಾಗೂ ಇಂಜಿನೀಯರಿಂಗ್ ಸೀಟುಗಳ ದೊರೆಯುವಂತಾಗಲು ಬ್ಲಾಕಿಂಗ್ ದಂಧೆ ತಡೆಯಬೇಕು ಎಂದು ಎಬಿವಿಪಿ ಆಗ್ರಹಿಸಿದೆ.
ಈ ಕುರಿತಂತೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ತಾಲೂಕು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಶ್ರೀಪಾದ ಹೆಗಡೆ, ಶಿಕ್ಷಣ ಕ್ಷೇತ್ರದಲ್ಲಿ ಮುಂದೆ ಇರುವ ರಾಜ್ಯ ಕರ್ನಾಟಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಮತ ಇಂಜಿನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ರಾಜ್ಯದಲ್ಲಿ ಹೋರಾಟ ನೆಡೆಸಿ ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳನ್ನು ಜಾರಿ ಗೊಳಿಸಿತ್ತು. ಆದರೆ ಕರ್ನಾಟಕದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟುಗಳ ಬ್ಲಾಕಿಂಗ್ ದಂಧೆಯನ್ನು ಸಾಕ್ಷಿ ಸಮೇತ ಐಟಿ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post