ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡಿನ ಉದಯೋನ್ಮುಖ ಕವಯಿತ್ರಿ, ಲೇಖಕಿ ಕು.ನಿತ್ಯಶ್ರೀ ಅವರು ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದ ಸಾಹಿತ್ಯ ಕೇಸರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನಿತ್ಯಶ್ರೀ ಅವರು ತಮ್ಮ ಕನವರಿಕೆ ಕೃತಿಗಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದು, ಸಿದ್ಧಗಂಗಾ ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಿದ್ದಗಂಗಾ ಶ್ರೀಗಳು, ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ, ಹಿರಿಯ ಸಾಹಿತಿ ದೊಡ್ಡರಂಗೇಗೌಡ ಮತ್ತು ಸಂಸ್ಥೆಯ ಮುಖ್ಯಸ್ಥ ಶ್ರೀ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post