ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ರೈಲ್ವೆ ನಿಲ್ದಾಣದ ವಾಹನ ನಿಲುಗಡೆ ಸಮೀಪದ ಖಾಲಿ ಜಾಗದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ನಾಲ್ವರನ್ನು ಬಂಧಿಸಿರುವ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊಸಮನೆ ನಿವಾಸಿ ನವೀನ್ (28), ಶಿಕಾರಿಪುರ ನಿವಾಸಿಗಳಾ ಪ್ರದೀಪ್ (25), ಗಿರೀಶ್ (29) ಹಾಗೂ ಸೊರಬದ ಬಸವರಾಜಪ್ಪ (48) ಬಂಧಿತ ಆರೋಪಿಗಳಾಗಿದ್ದಾರೆ.
ದಾಳಿ ವೇಳೆ ಸುಮಾರು 38,000ರೂ. ಮೌಲ್ಯದ 1ಕೆಜಿ 59ಗ್ರಾಂ ಒಣ ಗಾಂಜಾ, 5 ಮೊಬೈಲ್, 500 ರೂ. ನಗದು ಮತ್ತು ಕೃತ್ಯಕ್ಕೆ ಬಳಸಿದ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಯನಗರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕಾನೂನು ರೀತ್ಯ ಪ್ರಕರಣ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post