ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಗರದ ಎಲ್ಲಾ 35 ವಾರ್ಡ್‌ಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಸಹಯೋಗದೊಂದಿಗೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದ್ದು, ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ನೇತೃತ್ವದಲ್ಲಿ ಬಡಾವಣೆಯ ಎಲ್ಲಾ ರಸ್ತೆಗನ್ನು ಸ್ಯಾನಿಟೈಸ್ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಪ್ರಕಾಶ್, ಹೊಸಮನೆ ವಾರ್ಡ್ ಯುವ ಕಾಂಗ್ರೆಸ್ ಅಧ್ಯಕ್ಷ ವಿ. ಶರತ್, ಪ್ರಮುಖರಾದ ಎಂ. ರಾಹುಲ್, ಪುಷ್ಪಕ್ ಕುಮಾರ್, ಅನ್ನು ಕೇಬಲ್ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post