No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇದು ಯಾವುದೋ ದೇಶ, ರಾಜ್ಯದ್ದಲ್ಲ | ಶಿವಮೊಗ್ಗದ ಸರ್ಜಿ ಆಸ್ಪತ್ರೆ ವೈದ್ಯರ ಅಮೋಘ ಸಾಧನೆ | ಏನಿದು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 23, 2024
in ಶಿವಮೊಗ್ಗ
0
ಇದು ಯಾವುದೋ ದೇಶ, ರಾಜ್ಯದ್ದಲ್ಲ | ಶಿವಮೊಗ್ಗದ ಸರ್ಜಿ ಆಸ್ಪತ್ರೆ ವೈದ್ಯರ ಅಮೋಘ ಸಾಧನೆ | ಏನಿದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಎರಡು ತುಂಡಾಗಿದ್ದ ಕೈಗೆ ಶಸ್ತ್ರಚಿಕಿತ್ಸೆ ನಡೆಸಿ, ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ಇಲ್ಲಿನ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ #SarjiHospital ತಜ್ಞ ವೈದ್ಯರ ತಂಡ ಯಶಸ್ಸು ಸಾಧಿಸಿ ರೋಗಿಗೆ ಮರು ಜೀವನವನ್ನು ಕಲ್ಪಿಸಿದೆ.

ಜಿಲ್ಲೆಯ ಸಾಮಿಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಕಾರ್ಮಿಕರೊಬ್ಬರ ಕೈ ಆಕಸ್ಮಿಕವಾಗಿ ಮರ ಕೊಯ್ಯುವ ಯಂತ್ರಕ್ಕೆ ಸಿಲುಕಿ ಎರಡು ತುಂಡಾಗಿತ್ತು. ಸಂಪೂರ್ಣ ಕತ್ತರಿಸಿದ ಮುಂಗೈಯನ್ನು ಐಸ್ ಬಾಕ್ಸ್ ನಲ್ಲಿ ಇಟ್ಟುಕೊಂಡು ರೋಗಿಯು ಆಸ್ಪತ್ರೆಯ ಅಪಘಾಥ ವಿಭಾಗಕ್ಕೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಸತತವಾಗಿ 7 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ #Surgery ಮಾಡಿದ್ದು, ಮುಂಗೈನ ಮಾಂಸಖಂಡ , ಮೂಳೆ ಹಾಗೂ ನರಗಳನ್ನು ಯಶಸ್ವಿಯಾಗಿ ಮರು ಜೋಡಿಸಿ ರೋಗಿಗೆ ಹೊಸ ಬದುಕು ಕೊಟ್ಟಿದ್ದಾರೆ.
ರೋಗಿಗೆ ಉತ್ತಮ ಆರೈಕೆ ಮಾಡಿ ಒಂದು ವಾರದ ಬಳಿಕ ಡಿಸ್ಚಾರ್ಜ್ ಮಾಡಲಾಗಿತ್ತು, ಆನಂತರ ಕಾಲ ಕಾಲಕ್ಕೆ ತಪಾಸಣೆ ನಡೆಸಿ, ಇದೀಗ ಕೈ ಚಲನವಲನ ಚೆನ್ನಾಗಿದ್ದು, ರೋಗಿಯು ಚೇತರಿಸಿಕೊಂಡಿದ್ದಾರೆ. ಸರ್ಜಿ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಹಾಗೂ ಮೂಳೆ ರೋಗ ತಜ್ಞರಾದ ಡಾ.ಮಂಜುನಾಥ್ , ವೈದ್ಯಕೀಯ ಅಧೀಕ್ಷಕ ಹಾಗೂ ಅರಿವಳಿಕೆ ತಜ್ಞರಾದ ಡಾ.ವಾದಿರಾಜ ಕುಲಕರ್ಣಿ ಮತ್ತು ಡಾ.ಮೂರ್ಕಣಪ್ಪ, ಡಾ.ಸಂತೋಷ್, ಡಾ. ಅರ್ಜುನ್ ಅವರ ತಂಡ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.

ಡಾ.ಮಂಜುನಾಥ್

Also read: ಲೋಕಕಲ್ಯಾಣಕ್ಕಾಗಿ ಆ.23ರಿಂದ ಸಂಪೂರ್ಣ ಋಗ್ವೇದ ಘನ ಪಾರಾಯಣ: ವೇ. ಬ್ರ.ಅಚ್ಯುತ ಅವಧಾನಿ
ತುಂಡಾದ ಕೈ ಮರು ಜೋಡಣೆ, ಹೇಗೆ ಸಾಧ್ಯ?
ಅಪಘಾತ ಅಥವಾ ದುರಂತದಲ್ಲಿ ಕೈ-ಕಾಲು, ಬೆರಳು ಸೇರಿದಂತೆ ಯಾವುದೇ ಅಂಗಗಳು ಕತ್ತರಿಸಿದಾಗ ಅಯ್ಯೋ ಜೀವನ ಮುಗಿದೇ ಹೋಯ್ತು ಎಂದು ಚಿಂತಾಕ್ರಾಂತರಾಗುವುದಕ್ಕಿಂತ ಆ ಕ್ದಣ ಸ್ವಲ್ಪ ಯೋಚಿಸಿ ಮುಂಜಾಗ್ರತಾ ಕ್ರಮಗಳನ್ನು ಕ್ರಮ ಕೈಗೊಂಡರೆ ಮತ್ತೆ ಹೊಸ ಬದಕನ್ನು ಕಂಡುಕೊಳ್ಳಬಹುದು.

ಅವಘಡ ಸಂಭವಿಸಿ ಕೈ-ಕಾಲು, ಬೆರಳು ಸೇರಿದಂತೆ ಯಾವುದೇ ಅಂಗಗಳು ತುಂಡಾಗಿದ್ದರೆ ಭಯಪಡದೇ ಆತ್ಮಸ್ಥೈರ್ಯದೊಂದಿಗೆ ತುಂಡಾದ ಭಾಗವನ್ನು ಪ್ಲಾಸ್ಟಿಕ್ ಕವರ್ ನೊಂದಿಗೆ ಐಸ್ ಬಾಕ್ಸ್ ನಲ್ಲಿಟ್ಟು 6 ಗಂಟೆಯೊಳಗೆ ಆಸ್ಪತ್ರೆಗೆ ತಂದರೆ ಶಸ್ತ್ರ ಚಿಕಿತ್ಸೆ ಮಾಡಿ ಮರು ಜೋಡಿಸಲು ಸಾದ್ಯವಿದೆ, ಆದರೆ ಇದು ಬಹಳಷ್ಟು ಜನರಿಗೆ ಸಾಧ್ಯವಾಗುವುದಿಲ್ಲ.

ಡಾ.ಚೇತನ್ ನವಿಲೇಹಾಳ್

ಘಟನೆ ನಡೆದಾಗ ಭಯ ಭೀತರಾಗಿ ಕಟ್ ಆದ ಭಾಗವನ್ನು ತರದೇ ಮರೆತು ಆಸ್ಪತ್ರೆಗೆ ಬರುವ ಸಾಧ್ಯತೆಗಳೇ ಹೆಚ್ಚು. ಇಲ್ಲವೆ ಬಹಳ ತಡವಾಗಿ ಬಂದರೆ ತುಂಡಾದ ಭಾಗದ ಮಾಂಸ ಖಂಡಗಳು ಕೊಳೆತಂತಾಗುತ್ತವೆ, ಜೀವಕೋಶಗಳು ಸಾಯುತ್ತವೆ, ಹಾಗಾಗಿ ಚಿಕಿತ್ಸೆ ಮಾಡಿದರೂ ಯಶಸ್ವಿ ಆಗುವುದಿಲ್ಲ. ಆದರೆ ಈ ಘಟನೆಯಲ್ಲಿ ರೋಗಿಯು ಎಚ್ಚೆತ್ತುಕೊಂಡು ಸಕಾಲಕ್ಕೆ ತುಂಡಾದ ಕೈಯೊಂದಿಗೆ ಬಂದಿದ್ದರಿಂದ 7 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಮರು ಜೋಡಿಸಲು ಸಾಧ್ಯವಾಗಿದೆ.

ತುಂಡಾದ ಭಾಗಗಳನ್ನು ಯಾವುದೇ ಕಾರಣಕ್ಕೂ ನೇರವಾಗಿ ನೀರಿನಲ್ಲಿ ಅಥವಾ ಐಸ್ ಬಾಕ್ಸ್ ನೊಳಗೆ ಇಟ್ಟುಕೊಂಡು ಬರಬಾರದು. ಬದಲಾಗಿ ಪ್ಲಾಸ್ಟಿಕ್ ಕವರ್ ನಲ್ಲಿಟ್ಟು ಐಸ್ ಬಾಕ್ಸ್ ನಲ್ಲಿಟ್ಟು ತರಬೇಕು, ಹೀಗೆ ಮಾಡಿದಾಗ ಜೀವಕೋಶಗಳು ಸಾಯುವುದಿಲ್ಲ, ಅಂಗಾಂಗಳ ಮರು ಜೋಡಣೆ ಮಾಡುವ ಸೌಕರ್ಯ ಹಾಗೂ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಘಟಕವನ್ನು ಸರ್ಜಿ ಆಸ್ಪತ್ರೆಯು ಹೊಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: amputated handKannada NewsKannada News WebsiteLatest News KannadaSarji HospitalSarji Super Speciality HospitalShimogaShivamoggaShivamogga Newsಪ್ಲಾಸ್ಟಿಕ್ಶಸ್ತ್ರಚಿಕಿತ್ಸೆಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
Share219Tweet125Send
Previous Post

ಗುಂಡಪ್ಪ ಶೆಡ್ ವೆಟ್ ವೆಲ್ ಗೆ ಪಾಲಿಕೆ ಆಯುಕ್ತರ ಭೇಟಿ | ತ್ವರಿತ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Next Post

ಮೈಸೂರು | ವಿವಿಧೆಡೆ ರಾಯರ ಉತ್ತರ ಆರಾಧನೆ ವಿಜೃಂಭಣೆ ಮೆರವಣಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೈಸೂರು | ವಿವಿಧೆಡೆ ರಾಯರ ಉತ್ತರ ಆರಾಧನೆ ವಿಜೃಂಭಣೆ ಮೆರವಣಿಗೆ

ಮೈಸೂರು | ವಿವಿಧೆಡೆ ರಾಯರ ಉತ್ತರ ಆರಾಧನೆ ವಿಜೃಂಭಣೆ ಮೆರವಣಿಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

May 14, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

May 14, 2026
ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

May 14, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL