No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾನತೆ ವ್ಯವಸ್ಥೆಯ ನಿರ್ಮಾಣಕ್ಕೆ ಸರ್ವೋದಯ ಕಲ್ಪನೆ ಪೂರಕ

ಸರ್ವೋದಯ ದಿನಾಚರಣೆ ರಾಜ್ಯ ಸಮ್ಮೇಳನದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2023
in ಶಿವಮೊಗ್ಗ
0
ಸಮಾನತೆ ವ್ಯವಸ್ಥೆಯ ನಿರ್ಮಾಣಕ್ಕೆ ಸರ್ವೋದಯ ಕಲ್ಪನೆ ಪೂರಕ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |    
ಉಳ್ಳವರು ಬಡವರ ನಡುವಿನ ಅಂತರವನ್ನು ಹೋಗಲಾಡಿಸಿ ಸಮಾನತೆಯ ವ್ಯವಸ್ಥೆಯ ನಿರ್ಮಾಣಕ್ಕೆ ಸರ್ವೋದಯ ಕಲ್ಪನೆ ಪೂರಕವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಲದ ಸಹಯೋಗದಲ್ಲಿ ಸೋಮವಾರ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಿದ್ದ ಸರ್ವೋದಯ ದಿನಾಚರಣೆ ರಾಜ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ವೋದಯ ವ್ಯವಸ್ಥೆಯು ಸಾಮಾಜಿಕ ಹಿತದಲ್ಲಿ ವೈಯುಕ್ತಿಕ ಹಿತ ಕಾಣುವ, ಎಲ್ಲಾ ವೃತ್ತಿಯನ್ನು ಗೌರವಿಸುವ, ಯಾವುದೇ ಸ್ಥಾನದಲ್ಲಿರುವ ವ್ಯಕ್ತಿಯ ಶ್ರಮಾದಾನದ ಅವಶ್ಯಕತೆಯನ್ನು ಪ್ರತಿಪಾದಿಸುತ್ತದೆ. ಕೂಡಿಟ್ಟ ಹಣದಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಿಲ್ಲ. ಯಾವಾಗ ಗಳಿಸಿದ ಸಂಪತ್ತು ಸಮಾಜದಲ್ಲಿ ಮರು ಹೂಡಿಕೆಯಾಗುತ್ತಾ ಹೋಗುತ್ತದೆ, ಆಗ ಮಾತ್ರ ಸಾಮಾಜಿಕ ಅಭಿವೃದ್ಧಿ ಸಾಧ್ಯ.
ಗಾಂಧೀಜಿಯವರ ಆಶಯದಂತೆ ಪ್ರಾಬಲ್ಯತೆ, ಶೋಷಣೆ, ಅಶಾಂತಿಗೆ ಸಮಾಜದಲ್ಲಿ ಅವಕಾಶವಿಲ್ಲ. ಅವೆಲ್ಲವನ್ನೂ ಹೋಗಲಾಡಿಸಿ ಶಾಂತಿ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಶಿಕ್ಷಣದಿಂದ ಸಾಧ್ಯವಾಗಲಿದೆ. ಪ್ರಸ್ತುತ ದಿನಮಾನಕ್ಕೆ ತಕ್ಕಂತೆ ಗಾಂಧೀಜಿಯವರ ಆಶಯದ ಸಾಮಾಜಿಕ ವ್ಯವಸ್ಥೆಯನ್ನು ನಿರ್ಮಾಣ ಮಾಡುವಲ್ಲಿ, ಬೇಕಾದ ದಿಕ್ಸೂಚಿ ನೀಡುವ ಯೋಚನೆಗಳನ್ನು ಇಂತಹ ಕಾರ್ಯಕ್ರಮಗಳ ಮೂಲಕ ಯುವ ಸಮೂಹಕ್ಕೆ ನೀಡಬೇಕಿದೆ ಎಂದು ಹೇಳಿದರು.
ಮೇಲುಕೋಟೆಯ ಜನಪದ ಸೇವಾ ಟ್ರಸ್ಟ್‌ನ ಸುಮನಸ್ ಕೌಲಗಿ ಮಾತನಾಡಿ, ಎಲ್ಲೆಲ್ಲಿ ಅಭಿವೃದ್ಧಿಯ ಪದ ಬಳಕೆಯಾಗುತ್ತಿದೆಯೊ, ಅಲ್ಲಿ ನಮಗೆ ಬೇಕಾದ ಪ್ರಾಣಿ ಪಕ್ಷಿ ಪರಿಸರದ ನಾಶವಾಗುತ್ತಿದೆ. ಹಾಗಾದರೇ ಎಲ್ಲಾ ಜೀವಿಗಳನ್ನು ಉಳಿಸಿಕೊಂಡು ಹೋಗುವ ಅಭಿವೃದ್ಧಿ ಹೇಗೆ ಎನ್ನುವ ಪ್ರಶ್ನೆಗೆ ಗಾಂಧೀಜಿಯ ವಿಚಾರಗಳು ಉತ್ತರವಾಗಿ ಸಿಗುತ್ತದೆ.
Also read: ಭದ್ರಾವತಿ: ಗೋಡೆ ಬರಹದ ಪ್ರಚಾರಕ್ಕೆ ಶಾಸಕ ಈಶ್ವರಪ್ಪ ಚಾಲನೆ
ಸ್ವರಾಜ್ಯವೆಂದರೇ ಕೇವಲ ಬ್ರಿಟೀಷರಿಂದ ಭಾರತ ಸ್ವಾತಂತ್ರ ಹೊಂದುವುದು ಮಾತ್ರವಲ್ಲ. ಜೊತೆಗೆ ಪರಿಸರಕ್ಕೆ ಪೂರಕವಾದ ಅಭಿವೃದ್ಧಿಯ ಕಲ್ಪನೆಯು ಸ್ವರಾಜ್ಯದಿಂದ ಸಿಗಲಿದೆ. ನೈತಿಕತೆ, ರಾಜಕೀಯ ಆರ್ಥಿಕತೆ ಸಮಾಜವನ್ನು ನಿರ್ಣಯಿಸಲಿದೆ. ಅದರೇ ಎಲ್ಲರೂ ಚೆನ್ನಾಗಿದ್ದರೆ ನಾನು ಚೆನ್ನಾಗಿರುತ್ತೇನೆ ಎಂಬ ನೈತಿಕತೆ ಕಣ್ಮರೆಯಾಗಿದೆ.
ಗಾಂಧೀಜಿ ಅಂಬೇಡ್ಕರ್ ಅವರನ್ನು ದೇವರ ರೀತಿ ಕಾಣದೆಯೇ, ಮನುಷ್ಯ ರೂಪಿಯಾಗಿ ನೋಡಬೇಕಾಗಿದೆ. ಅವರು ನಡೆಸಿದ ಸವಾಲುಗಳು ನಮ್ಮ ಬದುಕನ್ನು ಪ್ರಭಾವಿತಗೊಳಿಸಬೇಕಿದೆ.
ಸ್ವಾವಲಂಬನೆಯ ಮೇಲೆ ಆರ್ಥಿಕತೆ ಇರಬೇಕು. ಕೊಡು ಕೊಳ್ಳುವಿಕೆಯ ನೈತಿಕ ಆಯಾಮ ಹೆಚ್ಚಾಗಬೇಕು. ಒಂದು ವಸ್ತುವಿನ ತಯಾರಿಕೆಯ ಹಿಂದಿನ ವಾಸ್ತವತೆ ಅರಿತು,  ವಸ್ತುಗಳನ್ನು ಕೊಂಡುಕೊಳ್ಳುವಾಗ ನೈತಿಕ ಜವಾಬ್ದಾರಿ ಗ್ರಾಹಕನಿಗಿರಬೇಕಿದೆ. ಬ್ರಾಂಡೆಡ್ ಬಟ್ಟೆಗಳ ಉತ್ಪಾದನೆಯ ಹಿಂದಿನ ಶೋಷಣೆಯ ಕರಾಳತೆಯ ಅರಿವಿರಬೇಕು. ನಮ್ಮ ಸುತ್ತಲಿನ ದೇಶೀಯ ಉತ್ಪಾದನಾ ವ್ಯವಸ್ಥೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿ.ಎಸ್.ನಾರಾಯಣರಾವ್ ಮಾತನಾಡಿ, ಜನಸಂಖ್ಯೆಯ ಸ್ಪೋಟದಿಂದಾಗಿ ಅವಶ್ಯಕತೆಗೆ ಅನುಸಾರವಾಗಿ ಎಲ್ಲವನ್ನು ತ್ಯಾಗ ಮಾಡುತ್ತಿದ್ದೇವೆ. ಹಳ್ಳಿಗಳಲ್ಲಿ ಸ್ವಾರ್ಥ ಪರ ಜೀವನ ನಿರ್ಮಾಣವಾಗುತ್ತಿರುವುದು ಅತ್ಯಂತ ಅಪಾಯಕಾರಿ ವಿಚಾರ. ಹಳ್ಳಿಗಳ ಸೊಸೈಟಿ ಮಾಲ್ ಗಳಾಗಿ ಬದಲಾಗಿದೆ ಎಂದು ವಿಷಾಧಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಸರ್ವೋದಯ ಮಂಡಲ ರಾಜ್ಯಾಧ್ಯಕ್ಷರಾದ ಡಾ‌.ಹೆಚ್.ಎಸ್.ಸುರೇಶ್, ಕಾರ್ಯದರ್ಶಿ ಯು.ಚಿ.ದೊಡ್ಡಯ್ಯ, ಜಿಲ್ಲಾಧ್ಯಕ್ಷರಾದ ಭಗವಂತರಾವ್, ಪ್ರಾಂಶುಪಾಲರಾದ ಡಾ.ಹೆಚ್.ಎಸ್. ನಾಗಭೂಷಣ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share220Tweet123Send
Previous Post

ಭದ್ರಾವತಿ: ಗೋಡೆ ಬರಹದ ಪ್ರಚಾರಕ್ಕೆ ಶಾಸಕ ಈಶ್ವರಪ್ಪ ಚಾಲನೆ

Next Post

ಭದ್ರಾವತಿಯಲ್ಲಿ ಸಂಸದ ರಾಘವೇಂದ್ರಗೆ ಘೇರಾವ್: ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾರ್ಮಿಕರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿಯಲ್ಲಿ ಸಂಸದ ರಾಘವೇಂದ್ರಗೆ ಘೇರಾವ್: ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾರ್ಮಿಕರು

ಭದ್ರಾವತಿಯಲ್ಲಿ ಸಂಸದ ರಾಘವೇಂದ್ರಗೆ ಘೇರಾವ್: ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾರ್ಮಿಕರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

2026ರಲ್ಲಿ ವೃತ್ತಿಜೀವನದ ಬೆಳವಣಿಗೆಗೆ ನೆರವಾಗುವ ಬೆಂಗಳೂರಿನ ಪ್ರಮುಖ 10 ಕಂಪನಿಗಳ ಪಟ್ಟಿ ಪ್ರಕಟಿಸಿದ ಲಿಂಕ್ಡ್‌ ಇನ್

May 20, 2026
“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

May 20, 2026
GE Aerospace to Invest ₹100 Crore in Pune Facility, Boosting India Manufacturing

ಪುಣೆಯ 100 ಕೋಟಿ ಹೂಡಿಕೆಯೊಂದಿಗೆ ಭಾರತದಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೇಗಗೊಳಿಸಲು ಮುಂದಾಗಿರುವ GE ಏರೋಸ್ಪೇಸ್

May 20, 2026
ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

May 20, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL