ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಾಲಾ ಶಿಕ್ಷಣವನ್ನು ಪೂರೈಸಿದ ನಂತರ ಉನ್ನತ ಶಿಕ್ಷಣ ಪಡೆಯಲು ಬಯಸುವ ಹೆಣ್ಣುಮಕ್ಕಳಿಗೆ ನೆರವಾಗುವ ಉದ್ದೇಶದಿಂದ ಅಜೀಂ ಪ್ರೇಮ್‍ಜಿ ಫೌಂಡೇಷನ್ #Ajeem Premji Foundation ಅಜೀಂ ಪ್ರೇಮ್‍ಜಿ ವಿದ್ಯಾರ್ಥಿವೇತನವನ್ನು ಘೋಷಿಸಿದ್ದು, 2025-26ನೇ ಶೈಕ್ಷಣಿಕ ವರ್ಷದಲ್ಲಿ 2.5 ಲಕ್ಷ ಹೆಣ್ಣು ಮಕ್ಕಳಿಗೆ ಅಜೀಂ ಪ್ರೇಮ್‍ಜಿ ವಿದ್ಯಾರ್ಥಿವೇತನವನ್ನು ನೀಡಲಾಗುವುದು ಎಂದು ಫೌಂಡೇಷನ್ ಅಂದಾಜಿಸಿದೆ. ಈ ಕಾರ್ಯಕ್ರಮವು ದೇಶದ 18 ರಾಜ್ಯಗಳಲ್ಲಿ ಲಭ್ಯವಿರುತ್ತದೆ. 2025-26ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಸೆಪ್ಟೆಂಬರ್ 2025ರಲ್ಲಿ ಪ್ರಾರಂಭವಾಗಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‍ಗಢ, ಜಾಖರ್ಂಡ್, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ್, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ರಾಜಸ್ಥಾನ, ಸಿಕ್ಕಿಂ, ತೆಲಂಗಾಣ, ತ್ರಿಪುರಾ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ದೇಶದ ಹದಿನೆಂಟು ರಾಜ್ಯಗಳಿಗೆ ಈ ಯೋಜನೆ ಲಭ್ಯವಿದೆ. ಕಾರ್ಯಕ್ರಮದ ವಿವರಗಳು ಹಾಗೂ ಅದರ ವಿನ್ಯಾಸ ಅಥವಾ ವ್ಯಾಪ್ತಿಯಲ್ಲಿ ಯಾವುದೇ ಬದಲಾವಣೆಗಳಿದ್ದರೆ, ಅವುಗಳನ್ನು ಅರ್ಜಿ ಪ್ರಕ್ರಿಯೆ ಆರಂಭವಾಗುವ ವೇಳೆಗೆ ತಿಳಿಸಲಾಗುತ್ತದೆ. ಮುಂಬರುವ ವರ್ಷಗಳಲ್ಲಿ ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ದೇಶವ್ಯಾಪಿ ವಿಸ್ತರಿಸುವ ಸಾಧ್ಯತೆ ಇದೆ.2024-25ರಲ್ಲಿ 25,000ಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ಲಭ್ಯವಾಗಿದೆ.

ಪದವಿ-ಡಿಪ್ಲೋಮಾ ಕೋರ್ಸ್ ಮುಗಿಸುವವರೆಗೆ ಯಶಸ್ವಿಯಾಗಿ ಓದಿನಲ್ಲಿ ಮುಂದುವರೆಯುತ್ತಿದ್ದಲ್ಲಿ, ಪ್ರತಿ ವರ್ಷ 30,000 ರೂ., ನಂತೆ ನಾಲ್ಕು ವರ್ಷದ ಬಿ.ಎಸ್ಸಿ. ನಸಿರ್ಂಗ್ ಓದುವ ಹೆಣ್ಣುಮಗಳಿಗೆ ನಾಲ್ಕು ರ್ವಗಳಲ್ಲಿ ಒಟ್ಟು ರೂ. 1,20,000 ವಿದ್ಯಾರ್ಥಿವೇತನ ದೊರೆಯುತ್ತದೆ.ಈ ಹಣವನ್ನು ಪ್ರತಿ ವರ್ಷ ಎರಡು ಕಂತುಗಳಲ್ಲಿ ಹೆಣ್ಣುಮಕ್ಕಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಅವರು ಈ ಹಣವನ್ನು ತಮಗೆ ಬೇಕಾದ ರೀತಿಯಲ್ಲಿ ಬಳಸಿಕೊಳ್ಳಬಹುದು ಎಂದು ಅಜೀಂ ಪ್ರೇಮ್‍ಜಿ ಫೌಂಡೇಷನ್ ತಿಳಿಸಿದೆ.

2024-25ರ ಶೈಕ್ಷಣಿಕ ವರ್ಷದಲ್ಲಿ ಇಡೀ ಮಧ್ಯಪ್ರದೇಶ, ಹಾಗೂ ಉತ್ತರಪ್ರದೇಶ, ರಾಜಸ್ಥಾನ ಮತ್ತು ಜಾಖರ್ಂಡ್‍ನ ಕೆಲವು ಜಿಲ್ಲೆಗಳಲ್ಲಿ ಅಜೀಂ ಪ್ರೇಮ್‍ಜಿ ವಿದ್ಯಾರ್ಥಿವೇತನವನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲಾಯಿತು. 25000ಕ್ಕಿಂತ ಹೆಚ್ಚು ಹೆಣ್ಣುಮಕ್ಕಳಿಗೆ ಈ ಪ್ರಾಯೋಗಿಕ ಹಂತದಲ್ಲಿ ವಿದ್ಯಾರ್ಥಿವೇತನವನ್ನು ನೀಡಲಾಗಿದೆ. ಮೊದಲನೇ ವರ್ಷದ ವಿದ್ಯಾರ್ಥಿವೇತನದ ಹಣವನ್ನು ಈ ಹೆಣ್ಣುಮಕ್ಕಳ ಖಾತೆಗಳಿಗೆ ವರ್ಗಾಯಿಸಲಾಗಿದೆ. ಹೆಚ್ಚಿನ ಮಾಹಿತಿಗೆ ರಶ್ಮಿ ಪ್ರಭಾಕರ್ ಮೊಬೈಲ್: 9481934254 (ಡಿಚಿshmi.ಠಿಡಿಚಿbhಚಿಞಚಿಡಿ@ಞ2ಛಿommuಟಿiಛಿಚಿಣioಟಿs.iಟಿ)ಸಂಪರ್ಕಿಸಲು ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post