ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಾಲೆಗೆ ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿರುವ ಘಟನೆ ಸಾಗರದಲ್ಲಿ ನಡೆದಿದೆ. ಇಲ್ಲಿನ ಗಣಪತಿ ಕೆರೆಯಲ್ಲಿ ಬಾಲಕಿಯ ಮೃತದೇಹ ದೊರೆತಿದೆ.
ಬೆಳಲಮಕ್ಕಿಯ ರಕ್ಷಿತ (16) ನಿನ್ನೆ ಬೆಳಗ್ಗೆ ಶಾಲೆಗೆ ಹೋಗಿದ್ದು, ಸಂಜೆಯಾದರೂ ಮನೆಗೆ ವಾಪಸ್ಸಾಗದ ಹಿನ್ನೆಲೆ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಇಂದು ಬೆಳಿಗ್ಗೆ ಬಾಲಕಿ ಗಣಪತಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ
ಮೃತದೇಹವನ್ನು ಸಾಗರದ ಉಪವಿಭಾಗಿಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೋಷಕರ ದುಃಖ ಮುಗಿಲು ಮುಟ್ಟಿದೆ. ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Also read: ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗದಲ್ಲಿ ಯೆಲ್ಲೋ, ಕರಾವಳಿಯಲ್ಲಿ ರೆಡ್ ಅಲರ್ಡ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post