ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು Scouts and Guides ಮಕ್ಕಳಲ್ಲಿ ದೇಶಪ್ರೇಮ ಬೆಳೆಸುವ ಜತೆಯಲ್ಲಿ ಸೇವಾ ಮನೋಭಾವ ಗುಣಗಳನ್ನು ಕಲಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ PGR Sindhya ಹೇಳಿದರು.
ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಲ್ನಾಡ್ ಓಪನ್ ಗ್ರೂಪ್ ವತಿಯಂದ ಆಯೋಜಿಸಿದ್ದ ಗೀತ ಭಾರತಿ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದರು.

Also read: ಶ್ರೀ ಮಹಮ್ಮಾಯೀ ಭಜನಾ ಮಂದಿರ ಕುಂಟ್ರಕಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಪ್ರಾಥಮಿಕ ಶಿಕ್ಷಣ ಹಂತದಿಂದಲೇ ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ತೊಡಗಿಸಿಕೊಳ್ಳುವಂತೆ ಪೋಷಕರು ಹಾಗೂ ಶಿಕ್ಷಕರು ಮಾರ್ಗದರ್ಶನ ನೀಡಬೇಕು. ಇದರಿಂದ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ವೇದಿಕೆಗಳಲ್ಲಿ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ದೊರೆಯುತ್ತದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಮಾತನಾಡಿ, ಗೀತಭಾರತಿ ಮಕ್ಕಳಲ್ಲಿ ರಾಷ್ಟ್ರೀಯ ಮನೋಭಾವದ ಜತೆಯಲ್ಲಿ ದೇಶಕ್ಕಾಗಿ ಸೇವೆ ಮಾಡುವ ಸಂಕಲ್ಪ ಬೆಳೆಸುತ್ತದೆ. ಮಲ್ನಾಡ್ ಓಪನ್ ಗ್ರೂಪ್ ಪ್ರತಿ ವರ್ಷ ಇಂತಹ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮುಖ್ಯ ಆಯುಕ್ತ ಎಚ್.ಡಿ.ರಮೇಶ್ ಶಾಸ್ತಿç, ಮಲ್ನಾಡ್ ಓಪನ್ ಗ್ರೂಪ್ ಪೋಷಕ ಎಚ್.ಪರಮೇಶ್ವರ್, ಸಂಸ್ಥಾಪಕ ಸದಸ್ಯ ಸಾಯಿಕುಮಾರ್.ಟಿ.ಎನ್., ನಾಯಕ ರಾಜೇಶ್ ವಿ.ಅವಲಕ್ಕಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ. ವಿಜಯ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post