ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹಲವು ಕೊರೋನಾ ಪಾಸಿಟಿವ್ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ನಗರದ ವಿವಿಧ ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆತನ ಮನೆಯಿರುವ ಓಟಿ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಇನ್ನು, ಗಾಂಧಿ ಬಜಾರ್’ನ ಕೆಲವು ರಸ್ತೆ, ಕಸ್ತೂರಬಾ ರಸ್ತೆ, ಮಿಳಘಟ್ಟ, ಓಲ್ಡ್ ಬಾರ್ ಲೈನ್ ರಸ್ತೆ, ಕುಂಬಾರ ಗುಂಡಿ, ನ್ಯೂ ಮಂಡ್ಲಿ ಸೇರಿದಂತೆ ನಗರ ಬಡಾವಣೆಗಳ ಕೆಲವು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಅಲ್ಲದೇ, ಈ ಪ್ರದೇಶಗಳನ್ನು ಸ್ಯಾನಿಟೈಸ್ ಮಾಡಲಾಗಿದೆ.
Get In Touch With Us info@kalpa.news Whatsapp: 9481252093















