ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
15 ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ವಾಲಿಬಾಲ್ ಸ್ಪರ್ಧೆಯಲ್ಲಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ Jain Public School ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಸಾಗರದ ಹೊಂಗಿರಣ ಸ್ಕೂಲ್ ಆಫ್ ಎಕ್ಸಲೆನ್ಸ್ ಶಾಲೆಯಲ್ಲಿ ಏರ್ಪಡಿಸಿದ್ದ ಎಸ್’ಎಸ್’ಎಲ್’ಸಿ ವಾಲಿಬಾಲ್ ಸ್ಪರ್ಧೆಯಲ್ಲಿ 9 ಮತ್ತು 10ನೆಯ ತರಗತಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಈ ವಾಲಿಬಾಲ್ ತಂಡದ ಸ್ಪರ್ಧೆಯಲ್ಲಿ 15 ಶಾಲೆಗಳು ಪಾಲ್ಗೊಂಡಿದ್ದವು. ಅದರಲ್ಲಿ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
Also read: ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅನುಮತಿ ನೀಡಿ: ಡಿಸಿಗೆ ಜೆಡಿಯು ಮನವಿ
ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರಾದ ಎನ್. ಪ್ರಿಯದರ್ಶಿನಿ, ಸಂಯೋಜಕರಾದ ದಿವ್ಯ ಶೆಟ್ಟಿ ಹಾಗೂ ಶಾಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post