ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಮಾರ್ಚ್ 9 ರಿಂದ 29 ರವರೆಗೆ ಒಟ್ಟು 36 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ 2nd PUC Exam ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್ ತಿಳಿಸಿದರು.
ಮಾ.03 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ತ್ರಿಸದಸ್ಯ ಸಮಿತಿ ನೇಮಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ನೀಡುವ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಡಿಡಿಪಿಯು ಬಿ.ಕೃಷ್ಣಪ್ಪ, ಪರೀಕ್ಷಾಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದರು. ಸಭೆಯಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ ಪರೀಕ್ಷೆಯ ಅಧಿಕಾರಿಗಳು ಹಾಜರಿದ್ದರು.












Discussion about this post