ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 18,992 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರಥಮ ವಿಷಯದಲ್ಲಿ ಪರೀಕ್ಷೆ ಇಂದು ಆರಂಭಗೊಂಡಿದ್ದು, ಪರೀಕ್ಷಾ ಕೇಂದ್ರದ ಸುತ್ತಲೂ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಜಿಲ್ಲೆಯಲ್ಲಿ 36 ಹಾಗೂ ನಗರದಲ್ಲಿ 13 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ವಿದ್ಯಾರ್ಥಿಗಳು ನಿಗದಿತ ಸಮಯದಲ್ಲಿ ಪರೀಕ್ಷೆಗೆ ಹಾಜರಾದರು. ಎಲ್ಲಾ ವಿದ್ಯಾರ್ಥಿಗಳೊಂದಿಗೆ ಪೋಷಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಕ್ಕಳಲ್ಲಿ ಧೈರ್ಯ ತುಂಬಿದರು.
Also read: ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗೃಹಸಚಿವರ ಶುಭ ಹಾರೈಕೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















