ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೋವಿಡ್19ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸುವ ವಿಚಾರದಲ್ಲಿ ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜುಲೈ 20ರವರೆಗೂ ರೋಟರಿ ಚಿತಾಗಾರದ 200 ಮೀಟರ್ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದು, ಕೋವಿಡ್19ನಿಂದ ಮೃತಪಟ್ಟ ವ್ಯಕ್ತಿಯ ಶವ ಸಂಸ್ಕಾರ ನೆರವೇರಿಸಲು ಚಿತಾಗಾರಕ್ಕೆ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ರಾಜೀವ್ ಗಾಂಧಿ ಬಡಾವಣೆಯ ನಿವಾಸಿಗಳು ಅಡ್ಡಿಪಡಿಸಿದ್ದರು. ಆನಂತರ ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಯಪಡಿಸಿದ ನಂತರ ಶವ ಸಂಸ್ಕಾರ ನೆರವೇರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋವಿಡ್19ರಿಂದ ಮೃತಪಟ್ಟವರ ಶವ ಸಂಸ್ಕಾರ ನೆರವೇರಿಸುವ ಸಂದರ್ಭದಲ್ಲಿ ಕಾನೂನು ಹಾಗೂ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಉದ್ದೇಶದಿಂದ ಜುಲೈ 20ರ ಸಂಜೆ 6 ಗಂಟೆಯವರೆಗೂ ಈ ಪ್ರದೇಶದಲ್ಲಿ ಭಾರತೀಯ ದಂಡ ಸಂಹಿತೆ ಕಲಂ 144ರ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದಿದ್ದಾರೆ.
Get In Touch With Us info@kalpa.news Whatsapp: 9481252093
 
	    	

 Loading ...
 Loading ... 
							



 
                
Discussion about this post