ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹಳ್ಳಿಗಳಲ್ಲಿ ಕಾರ್ಯಶೀಲವಾಗಿರುವ ಸ್ವಸಹಾಯ ಸ್ತ್ರೀಶಕ್ತಿ ಸಂಘಗಳು ಪ್ರಮುಖ ಪಾತ್ರ ವಹಿಸಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು.
ನಗರದ ಕಮಲಾ ನೆಹರು ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ನೂತನ ಎನ್.ಸಿ.ಸಿ ಘಟಕದ ಉದ್ಘಾಟನೆ ಹಾಗೂ ವಾಣಿಜ್ಯ ವೇದಿಕೆ, ಮಹಿಳಾ ಸಬಲೀಕರಣ ಘಟಕಗಳಿಂದ ‘ಮಹಿಳೆ ಮತ್ತು ಸ್ವಾವಲಂಬನೆ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಸ್ವಸಹಾಯ ಸ್ತ್ರೀಶಕ್ತಿ ಸಂಘಗಳನ್ನು ಹೆಣ್ಣು ಮಕ್ಕಳು ಸಧೃಡವಾಗಿ ಸಂಘಟಿಸುತ್ತಿದ್ದಾರೆ. ಸಾಲ ನೀಡುವ ಮತ್ತು ಪಾವತಿಸುವ ಕ್ರಮವನ್ನು ವ್ಯವಸ್ಥಿತವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ಕೃಷಿಯ ಜೊತೆಗೆ ಸ್ವಂತ ಉದ್ಯಮಗಳನ್ನು ಪ್ರಾರಂಭಿಸಿದ್ದಾರೆ. ಇಂತಹ ಅನೇಕ ಉದಾಹರಣೆಗಳು ಮಹಿಳೆಯರಲ್ಲಿರುವ ಆಡಳಿತ ಕೌಶಲ್ಯತೆಗೆ ನಿದರ್ಶನವಾಗಿದೆ.

ಇಂದು ಮಹಿಳೆಯರು ವಿವಿಧ ಕ್ಷೇತ್ರಗಳ ಮುಂಚೂಣಿ ನಾಯಕರಾಗಿ ರೂಪಗೊಂಡಿದ್ದಾರೆ. ಇದಕ್ಕೆ ಮುಖ್ಯ ಕಾರಣ ಶಿಕ್ಷಣ. ಹತ್ತನೇ ತರಗತಿಯ ನಂತರ ಮದುವೆ, ತಾಯ್ತನ ಎಂಬ ಸೀಮಿತತೆಯ ಕಾಲ ಬದಲಾಗಿದೆ. ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ಆದ ಪರಿವರ್ತನೆಯಿಂದ, ಐಟಿ ಬಿಟಿ ರಂಗದಲ್ಲಿ ಹೇರಳ ದುಡಿಮೆ ಸಾಧ್ಯವಾಗಿದೆ.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು. ಪ್ರಾಂಶುಪಾಲರಾದ ಡಾ.ಆರ್.ಎಂ.ಜಗದೀಶ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ಡಾ.ಓಂಕಾರಪ್ಪ, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ಆಶಲತಾ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post