ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಸಮೀಪ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬೈಕ್ ಸವಾರರನ್ನು ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಗಮನಿಸಿ ಗಾಯಳುಗಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಘಟನೆ ಹಿನ್ನೆಲೆ:
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವ ಮಾರ್ಗ ಮಧ್ಯೆ ಬೈಕ್ ಅಪಘಾತವಾಗಿ ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವುನ್ನು ಗಮನಿಸಿದ ಸಚಿವರು ತಕ್ಷಣವೇ ತಮ್ಮ ಎಸ್ಕಾರ್ಟ್ ವಾಹನದಲ್ಲಿ ಅಪಘಾತಕ್ಕೆ ಒಳಗಾದವರನ್ನು ಮೆಗ್ಗಾನ್ ಆಸ್ಪತ್ರೆಗೆ ಕಳಿಸಿದ್ದಾರೆ.
ಆರಗ ಜ್ಞಾನೇಂದ್ರ ಶಾಸಕರಾದ ಅವಧಿಯಲ್ಲೂ ರಸ್ತೆ ಅಪಘಾತವಾದ ಸಂದರ್ಭದಲ್ಲಿ ಅನೇಕ ಬಾರಿ ಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಹಣಗೆರೆಕಟ್ಟೆ, ಬಳಗಟ್ಟೆಯಲ್ಲೂ ಈ ಹಿಂದೆ ಅನೇಕರನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಕಳುಹಿಸಿ ಮಾದರಿಯಾಗಿದ್ದರು. ತಾನೊಬ್ಬ ಸಚಿವ ಎಂದು ಬೀಗದೆ ಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುತ್ತಿರುವ ಆರಗ ಅವರ ಪ್ರಾಮಾಣಿಕ ಸೇವೆ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post