ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ಜಾತಿ ಓಬಿಸಿ ಅಲ್ಲ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ Rahul Gandhi ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಕೂರಿಸಿಕೊಂಡು ಪಾಠ ಮಾಡಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ K S Eshwarappa ಸಲಹೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, 1994ರಲ್ಲಿ ಗುಜರಾತ್ ನಲ್ಲಿ ಕಾಂಗ್ರೆಸ್ ಸರ್ಕಾರ ನರೇಂದ್ರ ಮೋದಿ ಅವರ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಿತ್ತು ಈ ಮಾಹಿತಿ ಇಲ್ಲದ ಅಜ್ಞಾನಿ ರಾಹುಲ್ ಗಾಂಧಿ ನರೇಂದ್ರ ಮೋದಿಯವರು ಹಿಂದುಳಿದ ವರ್ಗಕ್ಕೆ ಸೇರಿಲ್ಲ ಎಂದು ಹೇಳಿದ್ದಾರೆ. ನರೇಂದ್ರ ಮೋದಿ ಇಡೀ ವಿಶ್ವದ ಜನರ ಮನಸ್ಸನ್ನು ಗೆದ್ದಿರುವ ನಾಯಕ ಅಂತಹ ರಾಷ್ಟ್ರೀಯ ನಾಯಕನಿಗೆ ಅಪಮಾನ ಆಗುವಂತಹ ಮಾತನ್ನು ರಾಹುಲ್ ಗಾಂಧಿ ಆಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Also read: ಪಾಲಿಕೆ ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಸುವಂತೆ ಸಚಿವ ಬೈರತಿ ಸುರೇಶ್‌ರಿಗೆ ಮನವಿ
ರಾಹುಲ್ ಗಾಂಧಿ ಹೇಳಿರುವ ಕಾರಣಕ್ಕೆ ಈಗ ನಾವು ಕೂಡ ರಾಹುಲ್ ಗಾಂಧಿ ಜಾತಿ ಯಾವುದು ಎಂದು ಪ್ರಶ್ನೆ ಮಾಡಬೇಕಾಗಿದೆ ರಾಹುಲ್ ಗಾಂಧಿ ತಾಯಿ ಸೋನಿಯಾ ಗಾಂಧಿ Sonia Gandhi ತಂದೆ ರಾಜೀವ್ ಗಾಂಧಿ Rajiv Gandhi ಅವರ ಅಜ್ಜಿ ಇಂದಿರಾಗಾಂಧಿ ಆದರೆ ಅಜ್ಜ ಫಿರೋಜ್ ಖಾನ್ ಹಾಗಾಗಿ ಸಾರ್ವಜನಿಕರೇ ರಾಹುಲ್ ಗಾಂಧಿ ಜಾತಿ ಬಗ್ಗೆ ಚರ್ಚೆ ಮಾಡುತ್ತಾರೆ. ಇದರ ಬಗ್ಗೆ ರಾಹುಲ್ ಗಾಂಧಿ ಎಚ್ಚರಿಕೆ ವಹಿಸಲಿ ಎಂದು ಕಿವಿಮಾತು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post