ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಾಡಿನ ಹಿರಿಯ ಸಾಹಿತಿ ಡಾ. ನಾ.ಡಿಸೋಜ (87) ಅವರು ಇಂದು ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಮುಲ್ಲರ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 7.30 ಕ್ಕೆ ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಬೇಳೂರು ಗೋಪಾಲ ಕೃಷ್ಣ ನಾ.ಡಿಸೋಜ ಅವರದ್ದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ ಎರಡೂ ಒಂದೇ. ಬರೆದಂತೆ ಬದುಕಿದವರು, ಬದುಕಿದಂತೆ ಬರೆದವರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ.ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post