ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ, ಗಾಯತ್ರಿ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ಸೆ.28ರ ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ಜ್ಞಾನದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಸಿ. ನಟರಾಜ್ ಭಾಗವತ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜ್ಞಾನಪ್ರಸಾರವಾಗಲಿ ಎಂದು ಸದಾಶಯದಿಂದ `ಕರ್ನಾಟಕದ ಮೊಟ್ಟಮೊದಲ ಸಾಮ್ರಾಜ್ಯ-ಕದಂಬ ಸಾಮ್ರಾಜ್ಯ’ ಇದರ ಸಂಸ್ಥಾಪಕರಾದ ಜಿಲ್ಲೆಯ ತಾಳಗುಂದದ ಮಯೂರ ಶರ್ಮ ಕುರಿತು ವಿಚಾರ ಸಂಕಿರಣ ಹಮ್ಮಿಕೊಂಡಿದ್ದು, ವಾಗ್ಮಿಗಳು, ಇತಿಹಾಸಕಾರ ಡಾ. ಲಕ್ಷ್ಮೀಶ್ ಹೆಗಡೆ ಸೋಂದಾ, ಪ್ರಾತ್ಯಕ್ಷಿಕೆಯ ಮೂಲಕ ವಿಚಾರಧಾರೆಗಳನ್ನು ಹಂಚಿಕೊಳ್ಳಲಿದ್ದಾರೆ ಎಂದರು.
ವಿಚಾರ ಸಂಕಿರಣವನ್ನು ವಿಕಾಸ ವಿದ್ಯಾಸಮಿತಿ ಕಾರ್ಯದರ್ಶಿ ಎ.ಜೆ. ರಾಮಚಂದ್ರ ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕರಾದ ಡಾ. ಧನಂಜಯ ಸರ್ಜಿ, ಡಿ.ಎಸ್. ಅರುಣ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಗಾಯತ್ರಿ ಪ್ರತಿಷ್ಠಾನದ ಅಧ್ಯಕ್ಷ ಕೆ.ಎಸ್. ನಾರಾಯಣ್ ರಾವ್ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಸೂರ್ಯನಾರಾಯಣ, ವೆಂಕಟೇಶ್‍ಮೂರ್ತಿ, ಸರಳಾ ಹೆಗಡೆ, ಕುಮಾರಶಾಸ್ತ್ರೀ, ಕೇಶವಮೂರ್ತಿ, ರಾಜು, ಶಂಕರನಾರಾಯಣ್ ಇನ್ನಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post