ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಸೆ.29 ರ ಸೋಮವಾರ ಬೆಳಗ್ಗೆ 11:00 ಕ್ಕೆ ಕಾಲೇಜಿನ ಚಂದನ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ವರ್ತಮಾನದ ವೈಚಾರಿಕ ಪ್ರಜ್ಞೆ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಉದ್ಘಾಟಿಸಲಿದ್ದು, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ.ಮಂಜುನಾಥ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಎ.ಟಿ.ಎನ್.ಸಿ.ಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಉಪನ್ಯಾಸಕ ಪ್ರವೀಣ್.ಬಿ.ಎನ್ ಉಪಸ್ಥಿತರಿರಲಿದ್ದಾರೆ.
Discussion about this post