ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶ್ರೀ ಕೃಷ್ಣ ಜನ್ಮಾಷ್ಟಮಿ (Krishna Janmashtami) ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಂದು ಶಿವಮೊಗ್ಗ (Shivamogga) ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸರ್ಕಾರದ ಅಧಿಸೂಚನೆಯನ್ವಯ 2025-26ನೇ ಸಾಲಿನ ಸೆಪ್ಟೆಂಬರ್ 4ರಂದು ‘ಮಾಂಸರಹಿತ ದಿನ’ ಎಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಅಂದು ಯಾವುದೇ ರೀತಿಯ ಪ್ರಾಣಿವಧೆ ನಡೆಸುವುದು ಹಾಗೂ ಮಾಂಸ ಮಾರಾಟ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ತಿಳಿಸಿದೆ.
ಮಾಂಸದಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಬೇಕು
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಮಾಂಸ ಮಾರಾಟದ ಉದ್ದಿಮೆದಾರರು ಸೆಪ್ಟೆಂಬರ್ 4ರಂದು ತಮ್ಮ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಬೇಕು. ಅಂದು ಯಾವುದೇ ರೀತಿಯ ಮಾಂಸ ಮಾರಾಟ ನಡೆಸದಂತೆ ಪಾಲಿಕೆ ಸೂಚನೆ ನೀಡಿದೆ.
ಮಾಂಸ ಮಾರಾಟಗಾರರು ಸರ್ಕಾರದ ಆದೇಶವನ್ನು ಪಾಲಿಸಿ, ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.
Also read>> ಜಿಬಿಎ ವ್ಯಾಪ್ತಿಯ ಪಾಲಿಕೆ ಶಾಲೆಗಳಲ್ಲಿ ಇನ್ಮುಂದೆ ಫೇಶಿಯಲ್ ಹಾಜರಾತಿ ವ್ಯವಸ್ಥೆ
ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ
ಮಾಂಸರಹಿತ ದಿನದಂದು ಪ್ರಾಣಿವಧೆ ಅಥವಾ ಮಾಂಸ ಮಾರಾಟ ನಡೆಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಹಾಗೂ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ) ಎಚ್ಚರಿಕೆ ನೀಡಿದ್ದಾರೆ.
ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಗರದಲ್ಲಿನ ಎಲ್ಲ ಮಾಂಸ ಮಾರಾಟದ ಉದ್ದಿಮೆದಾರರಿಗೆ ಪಾಲಿಕೆ ಸೂಚಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










