ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವ ಹಿಂದು ಪರಿಷದ್ ಶಕ್ತಿ ದೇವತೆಗಳ ಸಮಾಗಮ ಸಮಿತಿ ವತಿಯಿಂದ ಜ.2ರಂದು 23ನೇ ವರ್ಷದ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮ ಏರ್ಪಡಿಸಲಾಗಿದೆ.
ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ಮ 12:30ಕ್ಕೆ ಸಮಾಗಮ ಪೂಜೆ, ಭಜನೆ ಮತ್ತು ಉದ್ಘಾಟನಾ ಸಮಾರಂಭ ನಡೆಯಲಿದೆ.
1:15ಕ್ಕೆ ಅನ್ನಪೂಣೇಶ್ವರಿ ಆರಾಧನೆ, ಸಂಜೆ 4:30ರಿಂದ ಭಜನೆ, ಮಡಿಲಕ್ಕಿ ಸಮರ್ಪಣೆ ಹಾಗೂ 6:30ಕ್ಕೆ ಮಹಾಮಂಗಳಾರತಿ ನಡೆಯಲಿದೆ. ನಂತರ ದೀಪಾರಧನೆ ಆಯೋಜಿಸಲಾಗಿದೆ ಎಂದು ಸಮಿತಿ ತಿಳಿಸಿದೆ.
ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಮತ್ತು ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post