ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ #Sharavathi Pumped Storage ಪ್ರಸ್ತಾಪ ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿದ್ದು. ಆದರೂ ಕಾಂಗ್ರೆಸ್ ನವರು ಈ ಯೋಜನೆಯಲ್ಲಿ ಹಣ ಹೊಡೆದಿದ್ದಾರೆನ್ನುವ ಕೂಗಾಟ ನಡೆದಿದೆ. ಹಾಗಾದರೆ ಈ ಹಿಂದೆ ತಾವೇ ತಂದ ಯೋಜನೆಗಳಲ್ಲಿ ಬಿಜೆಪಿಯವರು ಹಣ ಹೊಡೆದಿದ್ದರೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು ನೀಡಿದ್ದಾರೆ.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿಚಾರದಲ್ಲಿ ಜನರಿಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ಯೋಜನೆಯ ಸಾಧಕ-ಭಾದಕಗಳ ಬಗ್ಗೆ ಚರ್ಚೆ ಮಾಡದೆ, ಈ ಯೋಜನೆಯಲ್ಲಿ ಕಾಂಗ್ರೆಸ್‌ನವರು ಹಣ ಹೊಡೆದಿದ್ದಾರೆಂದು ಗೂಬೆ ಕೂರಿಸಲಾಗುತ್ತಿದೆ. ಹಾಗಾದರೆ ಸಿಗಂಧೂರು ಸೇತುವೆ ಸೇರಿ ಅವರೇ ತಂದ ಯೋಜನೆಗಳಲ್ಲಿ ಬಿಜೆಪಿಯವರು ಎಷ್ಟು ಹಣ ಹೊಡೆದಿದ್ದಾರೆಂದು ಹೇಳಲಿ ಎಂದು ಕಿಡಿಕಾರಿದರು.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಅನುಕೂಲ ಆಗಲಿದೆ. ಈಗಿರುವ 1000 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿಯಿದೆ. ಇದಕ್ಕೆ ಫಾರೆಸ್ಟ್ ಹೋಗುತ್ತೆ, ಅದಾಗುತ್ತೆ ಎಂದರೆ ಹೇಗೆ ? ಯಾವ ಯೋಜನೆ ಮಾಡಿದ್ರೂ ಫಾರೆಸ್ಟ್ ಹೋಗುತ್ತೆ. ಹೆದ್ದಾರಿ ಮಾಡಿದ್ರೆ ಫಾರೆಸ್ಟ್ ಹೋಗಲ್ವಾ ? ಸುಮ್ನೆ ಕೆಟ್ಟ ಹೆಸರು ತರೋದು ಬೇಡ ಎಂದು ಗುಡುಗಿದರು.

ಶಾಸಕ ಡಾ.ಯತೀಂದ್ರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯುಕ್ತಿಕ ಹೇಳಿಕೆ. ಅದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ನಮ್ಮಲ್ಲಿ ಹೈಕಮಾಂಡ್ ಇದೆ. ಪಕ್ಷವೇ ನಿರ್ದಾರ ಮಾಡುತ್ತೆ ಎಂದರು. ನವೆಂಬರ್ ಕ್ರಾಂತಿ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಾಂತಿ ಇಲ್ಲ, ಬ್ರಾಂತಿಯೂ ಇಲ್ಲ ಎಲ್ಲವೂ ಸುಳ್ಳು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post