ಕಲ್ಪ ಮೀಡಿಯಾ ಹೌಸ್ | ಸಾಗರ(ಶಿವಮೊಗ್ಗ) |
ಭಾರೀ ಮಳೆಯ ಹಿನ್ನೆಲೆಯಲ್ಲಿ ಶರಾವತಿ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಲಿಂಗನಮಕ್ಕಿ ಜಲಾಶಯದಿಂದ ನೀರನ್ನು ಹೊರಕ್ಕೆ ಬಿಡುವ ಸಾಧ್ಯತೆಯಿದೆ.
ಈ ಕುರಿತಂತೆ ಜಲಾಶಯದ ಅಧಿಕಾರಿಗಳು ಮೂರನೇ ಎಚ್ಚರಿಕೆ ನೋಟೀಸ್ ಬಿಡುಗಡೆ ಮಾಡಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತರಳುವಂತೆ, ಯಾರೂ ಸಹ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಸಾಗರ ತಾಲೂಕಿನ ಲಿಂಗಮಮಕ್ಕಿ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಇಂದು ಮುಂಜಾನೆಗೆ 1815.35 ಅಡಿ ನೀರು ಸಂಗ್ರಹವಾಗಿದೆ. ಒಟ್ಟು 1819ಅಡಿ ಇರುವ ಜಲಾಶಯ ಮಟ್ಟ ಇದ್ದು, 1816 ಅಡಿ ತಲುಪಿದ ನಂತರ ನೀರು ಹೊರ ಬಿಡಲು ನಿರ್ಧಾರ ಮಾಡಲಾಗಿದೆ.
ಬಹುತೇಕ ನಾಳೆ ಬೆಳಗ್ಗೆ 10 ಗಂಟೆಗೆ ನೀರು ಹೊರಬಿಡುವ ಸಾಧ್ಯತೆಯಿದ್ದು, 59891 ಕ್ಯೂಸೆಕ್ ಒಳಹರಿವು ಹಿನ್ನೆಲೆ ನಾಳೆ ಬೆಳಗ್ಗೆ ವೇಳೆಗೆ 1816 ತಲುಪುವ ಸಾಧ್ಯತೆಯಿದೆ. ಕಳೆದ ವರ್ಷ ಈ ವೇಳೆ 1816 ಅಡಿ ನೀರು ತುಂಬಿತ್ತು.
ಜಲಾಶಯದಿಂದ ನೀರು ಹೊರಬಿಟ್ಟರೆ ಜೋಗ ಜಲಪಾತ ಮೈದುಂಬಿ ಹರಿಯಲಿದ್ದು, ಹೆಚ್ಚು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಇಂದು ಹಾಗೂ ನಾಳೆ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಹಾಗೂ ಆ.19ರ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಇಂದು ಹಾಗೂ ನಾಳೆ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಈ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಹಾಗೂ ಆ.19ರ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಸದ್ಯ ಬೆಂಗಳೂರಲ್ಲಿ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕು ಹೊರತು ಪಡಿಸಿ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಇನ್ನೂ ಕೊಡಗು ಜಿಲ್ಲೆಯಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಜಿಲ್ಲೆಯ ನಾನಾ ಭಾಗದಲ್ಲಿ ಅವಾಂತರ ಮುಂದುವರಿದಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಬೃಹತ್ ಮರಗಳು, ವಿದ್ಯುತ್ ಕಂಬಗಳು, ಧರಾಶಾಹಿಯಾಗಿವೆ.
ಶಿವಮೊಗ್ಗದಲ್ಲಿ ಮಳೆ ಅಲರ್ಟ್ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಶಾಲೆ ಮತ್ತು ಪಿಯುಸಿ ಮತ್ತು ಪದವಿ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post