No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಜೂ.28ರಂದು ಕಾರ್ಗಲ್ ಚಲೋ

kalpa News by kalpa News
June 27, 2026
in ಶಿವಮೊಗ್ಗ
0
Kargal Chalo on June 28th to protest against Sharavati pumped storage
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ರಾಷ್ಟ್ರಭಕ್ತರ ಬಳಗ ಮತ್ತು ಪರಿಸರಕ್ಕಾಗಿ ನಾವು, ಗೋವರ್ಧನ್ ಟ್ರಸ್ಟ್, ಮಾರಿಕಾಂಬ ಫೈನಾನ್ಸ್, ಶ್ರೀಗಂಧ, ಶಿವಸಂಕಲ್ಪ, ಕರವೇ ಸಿಂಹಸೇನೆ ಇನ್ನಿತರೆ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ, ಕಾರ್ಗಲ್ ಚಲೋ ಕಾರ್ಯಕ್ರಮವನ್ನು ಜೂನ್ 28ರಂದು ಭಾನುವಾರ ಫ್ರೀಡಂಪಾರ್ಕ್(ಅಲ್ಲಮ ಪ್ರಭು) ಮೈದಾನದಿಂದ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಪ್ರಮುಖರಾದ ಬಿ.ಎಂ. ಕುಮಾರಸ್ವಾಮಿ ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪಶ್ಚಿಮಘಟ್ಟ ಪ್ರದೇಶದಲ್ಲಿ ತಜ್ಞರ ವರದಿಯನ್ನು ಲೆಕ್ಕಿಸದೆ ವನ್ಯಜೀವಿ ಮತ್ತು ಪರಿಸರ ಕಾನೂನುಗಳನ್ನು ಬದಿಗೊತ್ತಿ ರಾಜ್ಯ ಸರ್ಕಾರದ ಒತ್ತಡ ಇದೆ ಎಂಬ ಕಾರಣ ಮುಂದೂಡಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಮುಂದಾಗಿದೆ ಎಂಬ ಅನುಮಾನ ಕಾಡುತ್ತಿದೆ. ಕೇಂದ್ರದ ಅನುಮತಿ ಬರುವ ಮುಂಚೆಯೇ ಇಲ್ಲಿ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ. 3500 ಕೋಟಿ ರೂ.ಯೋಜನೆ ಈಗ 10,500 ಕೋಟಿಗೆ ಏರಿದ್ದು ಬಜೆಟ್‍ನಲ್ಲೂ ಹಣ ಕಾಯ್ದಿರಿಸಲಾಗಿದೆ. ಇದನ್ನು ವಿರೋಧಿಸಿ ಶರಾವತಿ ಪಿಎಸ್‍ಪಿ ವಿರುದ್ಧ ಬೃಹತ್ ಜನಾಂದೋಲನವನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ ಭಾನುವಾರ ಬೆಳಿಗ್ಗೆ ಫ್ರೀಡಂಪಾರ್ಕ್‍ನಿಂದ ಸುಮಾರು 7 ಗಂಟೆಗೆ 108 ಬಸ್ಸುಗಳ ಮೂಲಕ 5000 ಸಾವಿರಕ್ಕೂ ಹೆಚ್ಚು ಪರಿಸರ ಹೋರಾಟಗಾರರು ಶಿವಮೊಗ್ಗದಿಂದ ಕಾರ್ಗಲ್ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಾರ್ಯಕ್ರಮಕ್ಕೆ ಪೂಜ್ಯರಾದ ಆದಿಚುಂಚನಗಿರಿ ಶಾಖಾ ಮಠದ ನಾದಮಯಾನಂದನಾಥ ಶ್ರೀಗಳು ಮತ್ತು ಬಿಳಿಕೆ ಮಠದ ಶ್ರೀಗಳು, ರಾಚೋಟೇಶ್ವರಿ ಶ್ರೀಗಳು, ತ್ಯಾವರೆಕೆರೆ ಮಠದ ಅಭಿನವ ಸಿದ್ಧಲಿಂಗಶಿವಾಚಾರ್ಯ ಸ್ವಾಮೀಜಿಗಳು ಚಾಲನೆ ನೀಡಲಿದ್ದಾರೆ. ಶಿವಮೊಗ್ಗ ಬೆಳಿಗ್ಗೆ 7ಗಂಟೆಗೆ ಹೊರಟು 10-30ಕ್ಕೆ ಸಾಗರ ಗಾಂಧಿವೃತ್ತದಲ್ಲಿ ಎಲ್ಲಾ ಹೋರಾಟಗಾರರು ಸಮ್ಮಿಲನಗೊಂಡು ಅಲ್ಲಿ ಬೃಹತ್ ಸಭೆ ಜರುಗಲಿದೆ. ಈ ಸಭೆಯನ್ನುದ್ದೇಶಿಸಿ ಬಂಗಾರಮಕ್ಕಿಯ ಶ್ರೀ ಮಾರುತಿ ಗುರೂಜಿಯವರು ಭಾಷಣ ಮಾಡಲಿದ್ದಾರೆ. ಸಾಗರ ನಗರದ ಹಲವಾರು ಪರಿಸರ ಸಂಘಟನೆಗಳು ಮತ್ತು ರೈತಪರ ಸಂಘಟನೆಗಳು ಹಾಗೂ ಈ ಯೋಜನೆಯಿಂದ ಸಂತ್ರಸ್ತರು ಈ ಹೋರಾಟಕ್ಕೆ ಕೈಜೋಡಿಸಲಿದ್ದಾರೆ. ಮಧ್ಯಾಹ್ನ ಸಿಂಗಧೂರು ದೇವಿಯ ದರ್ಶನ ಪಡೆದು ಅಲ್ಲಿ ಪ್ರಸಾದ ಭೋಜನ ಸ್ವೀಕರಿಸಿ, ಸಂಜೆ 4 ಗಂಟೆಗೆ ಕಾರ್ಗಲ್ ತಲುಪಿ ಬೃಹತ್ ಸಭೆ ಆಯೋಜಿಸಲಾಗಿದೆ.

Also read: Power Shock | ಪತ್ರೊಡೆ ಎಲೆ ಕೀಳುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಸಭೆಯ ನಂತರ ಕೆಪಿಸಿ ಅಧಿಕಾರಿಗಳಿಗೆ ಶರಾವತಿ ಪಿಎಸ್‍ಪಿ ವಿರುದ್ಧ ಮನವಿ ಸಲ್ಲಿಸಲಾಗುವುದು. ನಂತರ ಸಾಗರದ ಮೂಲಕ ವರದಹಳ್ಳಿಯ ಶ್ರೀಧರಾಶ್ರಮ ತಲುಪಿ ಅಲ್ಲಿ ರಾತ್ರಿ ಭೋಜನ ಮುಗಿಸಿ ಶಿವಮೊಗ್ಗಕ್ಕೆ ಹಿಂತಿರುಗುವ ಕಾರ್ಯಕ್ರಮವಿದ್ದು, ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಅವರು ಕೋರಿದ್ದಾರೆ.

JNNCE Shivamoggaರಾಷ್ಟ್ರಭಕ್ತರ ಬಳಗದ ಅಧ್ಯಕ್ಷರಾದ ಕೆ.ಎಸ್.ಈಶ್ವರಪ್ಪ ಮಾತನಾಡಿ, ಇತ್ತೀಚೆಗೆ ಸಂಸದ ಕಾಗೇರಿಯವರು ಬೆಳಗಾವಿಯಲ್ಲಿ ನನಗೆ ಮುಖಾಮುಖಿಯಾದಾಗ ಕೇಂದ್ರದ ಪರಿಸರ ಸಚಿವರಾದ ಭೂಪೇಂದ್ರ ಯಾದವ್ ಅವರು ಈ ಯೋಜನೆಗೆ ಕೇಂದ್ರದ ಒಪ್ಪಿಗೆ ನೀಡಿಲ್ಲ. ರಾಜ್ಯಸರ್ಕಾರ ಕೇಂದ್ರದ ಮೇಲೆ ಒತ್ತಡತಂತ್ರ ಹೇರುತ್ತಿದೆ. ಕೇಂದ್ರ ವಿವಿಧ ಪರಿಸರ ವಿಭಾಗಗಳು ಇನ್ನೂ ಇದಕ್ಕೆ ಒಪ್ಪಿಗೆ ನೀಡಿಲ್ಲ ಎಂದು ಹೇಳಿದ್ದಾರೆ. ಆದರೂ ಕೂಡ ರಾಜ್ಯ ಸರ್ಕಾರ ವಿಶೇಷ ಆಸಕ್ತಿವಹಿಸಿ ಅದರಲ್ಲೂ ಇಂಧನ ಸಚಿವ ಕೆ.ಜೆ. ಜಾರ್ಜ್‍ರವರು ತರಾತುರಿಯಲ್ಲಿ ಟೆಂಡರ್ ಪ್ರಕ್ರಿಯೆ ಮುಗಿಸಿದ್ದಾರೆ. 3500 ಕೋಟಿ ವೆಚ್ಚದ ಈ ಯೋಜನೆಗೆ 10500 ಕೋಟಿ ರೂ.ಗಳಿಗೆ ಯೋಜನಾವೆಚ್ಚ ಏರಿಸಲಾಗಿದೆ. ಪರಿಸರ ವಾದಿಗಳು ನೀಡಿದ ಪರ್ಯಾಯ ಮಾರ್ಗಗಳನ್ನು ನಿರ್ಲಕ್ಷಿಸಲಾಗಿದೆ. ಸಚಿವ ಜಾರ್ಜ್ ಅವರು ಏಕೆ ಈ ಯೋಜನೆಯ ಬಗ್ಗೆ ಹಠಮಾರಿ ಧೋರಣೆ ತಳೆದಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಪಶ್ಚಿಮಘಟ್ಟ ನಾಶಕ್ಕೆ ಹೊರಟಿದ್ದಾರೆಯೇ ಎಂಬ ಸಂಶಯ ಮೂಡುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ.ಮಾಜಿ ಸದಸ್ಯ ಕೆ.ಈ. ಕಾಂತೇಶ್, ಉಮೇಶ್ ಆರಾಧ್ಯ, ಶ್ರೀಕಾಂತ್, ಅಶೋಕ್‍ಕುಮಾರ್, ಗಾಂಧಿಬಸಪ್ಪ, ಜನಾರ್ಧನ್ ಪೈ, ಮಧುಸೂದನ್ ಐತಾಳ್, ಮೋಹನ್, ನವೀನ್‍ಕುಮಾರ್, ಬಿ.ಗಣೇಶ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKargil ChaloLatestNewsKannadaLocalNewsMalnadNewsNews in KannadaNews KannadaSharavati pumped storageShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Power Shock | ಪತ್ರೊಡೆ ಎಲೆ ಕೀಳುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

Next Post

ಶಿವಮೊಗ್ಗ | ಮಿಳಘಟ್ಟ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಶಾಸಕ ಚನ್ನಬಸಪ್ಪ ಮನವಿ

kalpa News

kalpa News

Next Post
ಶಿವಮೊಗ್ಗ | MLA Channabasappa appeals to issue title deeds to Milaghatta residents

ಶಿವಮೊಗ್ಗ | ಮಿಳಘಟ್ಟ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಶಾಸಕ ಚನ್ನಬಸಪ್ಪ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL