ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬದುಕಿನಲ್ಲಿ ಅನೇಕ ಸವಾಲುಗಳು ಸಹಜವಾಗಿದ್ದು ನಾವು ನಡೆಸುವ ಜೀವನ ಮತ್ತೊಬ್ಬರಿಗೆ ಸ್ಫೂರ್ತಿದಾಯಕವಾಗಿರಲಿ ಎಂದು ಬಿಗ್ ಬಾಸ್ ಖ್ಯಾತಿಯ ಶಮಂತ್ ಗೌಡ Big Boss Shamanth Gowda ಅಭಿಪ್ರಾಯಪಟ್ಟರು.
ಬುಧವಾರ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ‘ಉತ್ತಾನ – 2022’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಅನೇಕ ಆಕರ್ಷಣೆ ಸಹಜವಾಗಿದ್ದರು ಶೈಕ್ಷಣಿಕ ಕಲಿಕೆಯ ಕುರಿತಾಗಿ ಉದಾಸೀನ ಮಾಡಬೇಡಿ. ನಮ್ಮ ಬೆಳವಣಿಗೆಯಲ್ಲಿ ಪಾಠ ಹೇಳಿಕೊಟ್ಟ ಗುರುಗಳ ಹಾಗೂ ಸ್ನೇಹಿತರ ಪಾತ್ರ ಮಹತ್ವದಾಗಿದ್ದು ಅವರಿಗೆ ಸದಾ ಕೃತಜ್ಞರಾಗಿರಬೇಕಿದೆ ಎಂದರು.

Also read: ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿವಿ ನೂತನ ಕುಲಪತಿಯಾಗಿ ಡಾ. ಆರ್. ಸಿ. ಜಗದೀಶ್ ಆಯ್ಕೆ
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್, ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಜೆ.ಎನ್.ಎನ್ ಕಾಲೇಜಿನ ಡಾ.ಕೆ.ನಾಗೇಂದ್ರಪ್ರಸಾದ್, ಶೈಕ್ಷಣಿಕ ಡೀನ್ ಡಾ.ಮಂಜುನಾಥ. ಪಿ, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಸಿ.ಶ್ರೀಕಾಂತ್, ಕಾರ್ಯಕ್ರಮ ಆಯೋಜನಾ ಸಮಿತಿಯ ಸಿ.ಕೆ.ಅನುರಾಧ, ಡಾ.ಸಂತೋಷ , ಬಿ.ಹೆಚ್.ಪ್ರವೀಣ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದು ಗಾಯನ, ನೃತ್ಯ, ರಸಪ್ರಶ್ನೆ, ಫ್ಯಾಷನ್ ಶೋ ಸೇರಿದಂತೆ ಮುಂತಾದ ಸಾಂಸ್ಕೃತಿಕ ಹಾಗೂ ನಿರ್ವಹಣಾ ಕೌಶಲ್ಯ ಸ್ಫರ್ಧೆಗಳನ್ನು ಏರ್ಪಡಿಸಲಾಗಿತ್ತು.











Discussion about this post