ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
2021-22ನೆಯ ಸಾಲಿನ ಬಿಎಡ್ ಪರೀಕ್ಷೆಯಲ್ಲಿ ಪಟ್ಟಣದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳು ರ‍್ಯಾಂಕ್ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯ ನಡೆಸಿದ ಬಿಎಡ್ ಅಂತಿಮ ಪರೀಕ್ಷೆಯಲ್ಲಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು 1, 2, 4 ಹಾಗೂ 5ನೆಯ ರ‍್ಯಾಂಕ್ ಗಳಿಸಿದ್ದಾರೆ.
ಆಯೇಷಾ ಫರ್ಹೀನ್ ಶೇಖ್ ಅವರು ಶೇ.94.25ರಷ್ಟು ಅಂಕ ಗಳಿಸುವ ಮೂಲಕ ವಿಶ್ವವಿದ್ಯಾಲಯಕ್ಕೇ ಮೊದಲ ರ‍್ಯಾಂಕ್ ಪಡೆದಿದ್ದರೆ, ಶೇ.93.75ರಷ್ಟು ಅಂಕ ಪಡೆದ ಯು.ವಿ. ಲಾವಣ್ಯ ಎರಡನೆಯ ರ‍್ಯಾಂಕ್, ಶೇ.93.35ರಷ್ಟು ಅಂಕ ಪಡೆದ ಪ್ರಜ್ವಲಾ ನಾಲ್ಕನೆಯ ರ‍್ಯಾಂಕ್ ಹಾಗೂ ಶೇ.93.20ರಷ್ಟು ಅಂಕ ಪಡೆದ ಎಂ.ಎಸ್. ಸಿಂಧು ಐದನೆಯ ರ‍್ಯಾಂಕ್ ಗಳಿಸಿದ್ದಾರೆ.
ಇಂತಹ ಸಾಧನೆಯ ಮೂಲಕ ಕಾಲೇಜಿನ ಗೌರವವನ್ನು ಹೆಚ್ಚಿಸಿದ ಈ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.
ಈ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಈ ಸಾಧನೆಗೆ ಪೂರಕವಾದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ವರ್ಗವನ್ನು ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post