No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಸಂಸದ ರಾಘವೇಂದ್ರ ಜನ್ಮದಿನ: ಗಣ್ಯರು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

ಶಿಕಾರಿಪುರದಲ್ಲಿ ಭರ್ಜರಿ ಕಾರ್ಯಕ್ರಮ: ಗಣ್ಯರು ಹೇಳಿದ್ದೇನು?

kalpa News by kalpa News
August 16, 2021
in ಶಿಕಾರಿಪುರ
0
ಸಂಸದ ರಾಘವೇಂದ್ರ ಜನ್ಮದಿನ: ಗಣ್ಯರು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಸಂಸದ ಬಿ.ವೈ. ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಕುಮುದ್ವತಿ ವಿದ್ಯಾಸಂಸ್ಥೆಯಲ್ಲಿ, ಸಾರ್ಥಕ ಸಂವತ್ಸರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅವರಿಗೆ ಶುಭಾಶಯಗಳನ್ನ ತಿಳಿಸಲು ರಾಜ್ಯ ಸರ್ಕಾರದ ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಮಾಜಿ ಸಚಿವ ಮತ್ತು ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿವಿಧ ಕ್ಷೇತ್ರಗಳಲ್ಲಿಯ ಶಾಸಕರು ಸೇರಿದಂತೆ ಅನೇಕ ಮುಖಂಡರ ಮಹಾಪೂರವೇ ಹರಿದುಬಂದಿತು.

ಈ ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರರವರು, ತಂದೆ ಬಿ ಎಸ್ ಯಡಿಯೂರಪ್ಪ ರವರಿಗೆ ರಾಜಕೀಯ ನೆಲೆ ನೀಡಿರುವ ತಾಲ್ಲೂಕು ಹಾಗೂ ಜಿಲ್ಲೆಯ ಜನತೆಯ ಋಣ ತೀರಿಸಲು ಎಷ್ಟು ಕೃತಜ್ಞತೆಗಳನ್ನು ಸಲ್ಲಿಸಿದರು ಸಾಲದು. ಪುರಸಭಾ ಸದಸ್ಯರಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿಯಾಗುವವರೆಗೂ ನನ್ನ ತಂದೆಯ ಕೈ ಹಿಡಿದು ಬೆಳೆಸಿದ್ದೀರಿ. ಇಂಥವರ ಮಗನಾಗಿ ಹುಟ್ಟಿದ ನನ್ನನ್ನೂ ಸಹ ಪುರಸಭಾ ಸದಸ್ಯನಿಂದ, ಲೋಕಸಭಾ ಸದಸ್ಯನಾಗಿಸಿದ್ದೀರಿ ಈ ನಿಮ್ಮ ಪ್ರೀತಿ, ಪ್ರೋತ್ಸಾಹ ಮತ್ತು ಋಣವನ್ನು ತೀರಿಸಲು ಸಾಧ್ಯವಿಲ್ಲ ಎಂದರು.
ರಾಜಕೀಯ ವೃತ್ತಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಹಸ್ರಾರು ಹಿರಿಯರ ಆಶೀರ್ವಾದ ಮತ್ತು ಬೆಂಬಲಿಗರ ಶ್ರಮದಿಂದ ಸಂಸದನನ್ನಾಗಿಸಿದೆ. ಇದಕ್ಕೆ ತಕ್ಕಂತೆ ತಾಲ್ಲೂಕು ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಲ್ಲದೆ, ತಂದೆಯವರು ತೋರಿಸಿಕೊಟ್ಟ ಹಾದಿಯಲ್ಲೇ ಅವರು  ಇಟ್ಟು ಹೆಜ್ಜೆಯಲ್ಲೇ ನಿಮ್ಮೆಲ್ಲರ ಸಹಕಾರದಿಂದ ನಾನು ಮುಂದುವರಿಯುತ್ತೇನೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮುಂದುವರಿಸಿಕೊಂಡು, ಸರ್ಕಾರದ ಹಲವಾರು ಯೋಜನೆಗಳನ್ನ ಸಮಾಜದ ಎಲ್ಲಾ ವರ್ಗಗಳ ಜನತೆಗೆ ತಲುಪುವಂತೆ ಮಾಡಲು ಮುಂದಾಗುತ್ತೇನೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ತಾವು ಸಂಘ ಪರಿವಾರದಿಂದ ಆಗಮಿಸಿದ್ದು, 1973 ರಿಂದ ಬಿ ಎಸ್ ಯಡಿಯೂರಪ್ಪರವರ ಒಡನಾಡಿಯಾಗಿದ್ದೇನೆ. 1983 ರಿಂದಲೇ ನಾನು ರಾಜಕೀಯ ಪ್ರವೇಶಿಸಿ ಅಂದು ಪ್ರಥಮಬಾರಿಗೆ ವಿಧಾನಸಭಾ ಚುನಾವಣೆಗೆ ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಆಗ ಕೇವಲ 2 ಸಾವಿರ ಮತಗಳಿಂದ ಸೋತೆ. ಹೀಗೆ 9 ಬಾರಿ ವಿಧಾನಸಭೆಗೆ ಸ್ಪರ್ಧಿಸಿದ್ದು, 1994 ರಿಂದ ವಿಧಾನ ಸಭೆಗೆ ಪ್ರವೇಶಿಸಿದ್ದ ನಾನು, ನಿರಂತರವಾಗಿ ತೀರ್ಥಹಳ್ಳಿ ಮತ್ತು ಹೊಸನಗರದ ಜನತೆಯ ಕಷ್ಟ ಕಾರ್ಪಿಣ್ಯಗಳಿಗೆ ಅವರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ 4 ಬಾರಿ ಗೆಲುವು ಸಾಧಿಸಿದ್ದೇನೆ. 
ನನ್ನನು ಗಮನಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಂಸದ ಬಿ ವೈ ರಾಘವೇಂದ್ರರವರು ಮತ್ತು ಸಂಘ ಪರಿವಾರದವರು ನನಗೆ ಸಚಿವ ಸ್ಥಾನ ಕೊಡಿಸಲು ಪ್ರಯತ್ನ ಮಾಡಿದ್ದರ ಫಲವಾಗಿ ಈಗ ನನಗೆ ಅತ್ಯಂತ ಜವಾಬ್ದಾರಿಯ ಉತ್ತಮ ಖಾತೆಯನ್ನು ಕೊಡಿಸಿದ್ದಾರೆ ನನಗೆ ಅತ್ಯಂತ ಸಂತೋಷವಾಗಿದ್ದು ಇವರಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಶಾಸಕನಾಗಿ ಸ್ವ ಕ್ಷೇತ್ರದಲ್ಲಿಯೇ ಇರುತ್ತಿದ್ದ ನಾನು ಈಗ ರಾಜ್ಯ ಸುತ್ತುವಂತೆ ಮಾಡಲಾಗಿದೆ. ನಾನು ಸಚಿವನಾದ ನಂತರ ನನ್ನ ಕ್ಷೇತ್ರದ ತೀರ್ಥಹಳ್ಳಿ ಮತ್ತು ಹೊಸನಗರದ ಜನತೆಗೆ ಮನವಿ ಮಾಡಿ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ನನಗೆ ಜವಾಬ್ದಾರಿ ನೀಡಲಾಗಿರುವ ಹುದ್ದೆಗೆ ಗೌರವ ತರುವ ಪ್ರಯತ್ನ ಮಾಡುತ್ತೇನೆ ಎಂದರು.

ಬಿ ಎಸ್ ಯಡಿಯೂರಪ್ಪರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಅತಿ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಸಂಸದ ಬಿ ವೈ ರಾಘವೇಂದ್ರರವರು ಕೂಡ ಕೇಂದ್ರ ಸರ್ಕಾರದಿಂದ ಹಲವು ರೀತಿಯಲ್ಲಿ ಅಭಿವೃದ್ಧಿ ಯೋಜನೆ ಜಾರಿಗೆ ತಂದು ಅಭಿವೃದ್ಧಿಯತ್ತ ಗಮನ ಹರಿಸಿದ್ದಾರೆ. ಜಿಲ್ಲೆಯಲ್ಲಿ 15 ವರ್ಷಗಳ ಕಾಲ ಸಂಸದರಾವರು ಜಿಲ್ಲೆಯನ್ನು ಯಾವುದೇ ರೀತಿಯ ಅನುದಾನವಿಲ್ಲದೆ ಅಭಿವೃದ್ಧಿ ಪಡಿಸಿಲ್ಲ. ಆದರೆ ಬಿ ವೈ ರಾಘವೇಂದ್ರರವರು ಸಂಸದರಾದ ನಂತರ ಜಿಲ್ಲೆಯು ಅಭಿವೃದ್ಧಿಯಲ್ಲಿ ಚಿತ್ರಣವೇ ಬದಲಾಗುತ್ತಿದೆ. ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 55 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿಸಿದ್ದಾರೆ ಭಗವಂತನು ಅವರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಪಡಿಸಲು ಶಕ್ತಿ ನೀಡಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದರು.
ಸಾಗರ ಹೊಸನಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಮಾತನಾಡಿ, ಜಿಲ್ಲೆಯ ಬಿಜೆಪಿ ಶಾಸಕರಾಗಿರುವ ನಾವು ಸಂಘ ಪರಿವಾರದಿಂದ ಆಗಮಿಸಿದ್ದು, ಬಹುತೇಕ ಹೆಚ್ಚಿನ ರೀತಿಯಲ್ಲಿ ಹೋರಾಟದ ಹಾದಿಯಲ್ಲಿ ಬಂದವರು. ಬಿ ಎಸ್ ಯಡಿಯೂರಪ್ಪರವರು ಪ್ರಥಮ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗಲೇ ಅರಗ ಜ್ಞಾನೇಂದ್ರರವರು ಸಚಿವರಾಗಬೇಕಿತ್ತು ಆ ಸಮಯದಲ್ಲಿ ಅವರು ಸೋಲು ಕಂಡ ಕಾರಣ ಆ ಅವಕಾಶ ನನಗೆ ಸಿಕ್ಕಿತ್ತು.‌ ಆಗ ಅವರು ಸೋತರೂ ಪರವಾಗಿಲ್ಲ ಈಗ ಉತ್ತಮ ಜವಾಬ್ದಾರಿಯುತ ಖಾತೆಯೇ ಪಡೆದಿದ್ದಾರೆ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ ಬಿ ಅಶೋಕ್ ನಾಯಕ್, ಬೈಂದೂರು ಶಾಸಕ ಶಿವಕುಮಾರ್ ಶೆಟ್ಟಿ, ರಾಣೆಬೆನ್ನೂರು ಶಾಸಕ ಅರುಣ್ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಎಂಎಡಿಬಿ ಅಧ್ಯಕ್ಷ ಕೆ ಎಸ್ ಗುರುಮೂರ್ತಿ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ರಾಜ್ಯ ಅರಣ್ಯ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಕೆ ರೇವಣಪ್ಪ, ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಉರ್ದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮೌಲಾನ ಅಮ್ಜದ್ ಹುಸೇನ್ ಕರ್ನಾಟಕಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಸೇರಿದಂತೆ ಬಿಜೆಪಿ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಜರಿದ್ದರು.

ಸಂಸದ ಬಿ.ವೈ. ರಾಘವೇಂದ್ರರವರಿಗೆ ಶಿಕಾರಿಪುರ ತಾಲ್ಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತಲ್ಲದೇ, ವಿವಿಧ ಇಲಾಖೆಗಳ ಆಡಳಿತ ಅಧಿಕಾರಿಗಳು, ಅಭಿಮಾನಿಗಳಿಂದ ಅಭಿನಂದಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B Y RaghavendraCM B S YediyurappaKannada News WebsiteLatest News KannadaLocal NewsMalnad NewsShikaripuraShimogaShivamoggaShivamogga Newsಬಿ.ಎಸ್. ಯಡಿಯೂರಪ್ಪಬಿ.ವೈ. ರಾಘವೇಂದ್ರಮಲೆನಾಡು ಸುದ್ಧಿಶಿಕಾರಿಪುರಶಿವಮೊಗ್ಗಶಿವಮೊಗ್ಗ ನ್ಯೂಸ್ಹುಟ್ಟು ಹಬ್ಬ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಗಸ್ಟ್ 23ರಿಂದ ಶಾಲೆ ಆರಂಭ: ಸರ್ಕಾರದ ಅಧಿಕೃತ ಮಾರ್ಗಸೂಚಿಯಲ್ಲೇನಿದೆ? ಇಲ್ಲಿದೆ ಮಾಹಿತಿ…

Next Post

ಗಮನಿಸಿ! ಆಗಸ್ಟ್ 18ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಆಗಸ್ಟ್ 18ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL